ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶೂ ಲೇಸ್‍ಗಳನ್ನು ಕಟ್ಟಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ ಅವರು ಸಾಥ್ ನೀಡಿದರು. ಈ ವೇಳೆ ಅಪರೂಪದ ದೃಶ್ಯ ಕಂಡುಬಂದಿದೆ. ಸದ್ಯ ವೈರಲ್ ಆಗುತ್ತಿರುವ ಫೋಟೋದಲ್ಲಿ ರಾಹುಲ್ ಗಾಂಧಿ ತಮ್ಮ ತಾಯಿಯ ಶೂ ಲೇಸ್ ಅನ್ನು ಎಚ್ಚರಿಕೆಯಿಂದ ಕಟ್ಟುತ್ತಿರುವುದನ್ನು ಕಾಣಬಹುದಾಗಿದೆ.
ಇದೀಗ ಈ ಫೋಟೋ ನೋಡಿ ರಾಹುಲ್ ಗಾಂಧಿ ಸರಳತೆಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೆಡಿಕಲ್ ಚೆಕ್‍ಅಪ್‍ಗಾಗಿ ವಿದೇಶಕ್ಕೆ ತೆರಳಿದ್ದ ಸೋನಿಯಾ ಗಾಂಧಿ ಅವರು, ಸೋಮವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಸೋನಿಯಾಗಾಂಧಿ ಅವರು ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‍ನಲ್ಲಿ ತಂಗಿದ್ದರು.