ಬೆಂಗಳೂರು: ಕೆಎಂಎಫ್(KMF) ನಂದಿನಿ ಹಾಲಿನ( Nandini Milk) ಬೆಲೆ ಹೆಚ್ಚಳ ಮಾಡಿದೆ. ಪ್ರತಿ ಲೀಟರ್ ಹಾಲಿನ ಬೆಲೆ 2 ರೂ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಬಾಲಚಂದ್ರ ಜಾರಕಿಹೊಳಿ (balachandra jarkiholi) ಘೋಷಣೆ ಮಾಡಿದ್ದಾರೆ.
ಕೆಎಂಎಫ್ ನಂದಿನಿ ಹಾಲು ಲೀಟರ್ ಗೆ 2 ರೂಪಾಯಿ ಹೆಚ್ಚಿಸಿದ್ದು, ಮೊಸರು ಒಂದು ಲೀಟರ್ ಗೆ 45ರಿಂದ 47 ರೂಪಾಯಿಗೆ ಏರಿಕೆಯಾಗಿದೆ. ನಂದಿನಿ ಹಾಗೂ ಮೊಸರಿನ ಪರಿಸ್ಕೃತ ದರ ಇಂದಿನಿಂದಲೇ (ನವೆಂಬರ್ 24) ಜಾರಿಗೆ ಬರಲಿದೆ.
ನಿನ್ನೆ(ನವೆಂಬರ್ 23) ಬೆಂಗಳೂರಿನಲ್ಲಿ ನಡೆದ ಕೆಎಂಎಫ್ ನಿರ್ದೇಶಕರ ಸಭೆಯಲ್ಲಿ ಹಾಲು ಹಾಗೂ ಮೊಸರಿನ ದರ ಏರಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದು, ನಂದಿನಿ ಹಾಲಿನ ದರ ಏರಿಕೆ ಇಂದಿನಿಂದಲೇ (ನವೆಂಬರ್ 24) ಜಾರಿಗೆ ಬರಲಿದೆ. ಹೆಚ್ಚುವರಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಹೆಚ್ಚಳ ಮಾಡಿರುವ ದರದಲ್ಲಿ ಪೂರ್ತಿ ಹಣ ಹಾಲು ಉತ್ಪಾದಕರಿಗೆ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಮೂಲಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 31ರಿಂದ 32 ರೂಪಾಯಿ ಸಿಗಲಿದೆ. ಹಾಲು ಉತ್ಪಾದಕರಿಗೆ ಪ್ರಸ್ತುತ 29 ರೂಪಾಯಿ ನೀಡಲಾಗುತ್ತಿತ್ತು. ಒಂದೊಂದು ಒಕ್ಕೂಟ ಒಂದೊಂದು ದರ ನಿಗದಿ ಮಾಡಲಾಗಿದೆ. ಹಾಲು ಉತ್ಪಾದಕರಿಗೆ ಸರಾಸರಿ 31ರಿಂದ 32 ರೂಪಾಯಿ ಸಿಗಲಿದೆ ಎಂದು ತಿಳಿಸಿದರು.
ಹಾಲಿನ ದರ ಸಂಬಂಧ ಕಳೆದ 15 ದಿನಗಳಿಂದ ಸರ್ಕಾರ ಹಾಗೂ ಕೆಎಂಎಫ್ ಮಧ್ಯೆ ಹಗ್ಗಜಗ್ಗಾಟ ನಡೆದಿದೆ. ಮೊನ್ನೇ ಅಷ್ಟೇ ಕೆಎಂಎಫ್ ಹಾಲಿನ ದರ ಹೆಚ್ಚಿಸಿತ್ತು. ಆದ್ರೆ, ಇದನ್ನು ಸಿಎಂ ಬಸವರಾಜ ಬೊಮ್ಮಾಯಿ ತಡೆಹಿಡಿದಿದ್ದರು. ಆದ್ರೆ, ಇದೀಗ ಮತ್ತೆ ಕೆಎಂಎಫ್ ಸಭೆ ಸೇರಿ ಅಂತಿಮವಾಗಿ ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಿಸಿದೆ.
ಧರ ಏರಿಕೆಯಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿ ಹೊಳಿ ಗ್ರಾಹಕರಿಗೆ ಎಮ್ಮೆ ಬರೆ ಹಾಕಿದ್ದಾರೆ.