ಎಸ್.ಎಂ. ಕೃಷ್ಣ ಚೆನ್ನಾಗಿದ್ದಾರೆ- ವೈದ್ಯರ ಹೇಳಿಕೆ

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಸಂಜೆ ಎಸ್.ಎಂ.ಕೃಷ್ಣರಿಗೆ ತೀವ್ರ ಜ್ವರ, ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದರು.

ಇನ್ನು, ಎಸ್.ಎಂ.ಕೃಷ್ಣ ಅವರ ಆರೋಗ್ಯ ಕುರಿತಂತೆ ಮಾಹಿತಿ ಅವರ ಕಚೇರಿಯ ಮುಖ್ಯಸ್ಥರು ಮಾಧ್ಯಮ ಪ್ರಕಟನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಸ್‌.ಎಂ.ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳನ್ನು ಮಾಡಿದ್ದೇವೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಯಾವುದೇ ಊಹಾಪೋಹದ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಮನವಿ ಮಾಡ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *