ಕಾರೊಂದು ಡಿವೈಡ್‍ರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟ್ರಾವೆಲ್ಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿ, 6ಮಂದಿ ಗಂಭೀರ ಗಾಯಗೊಂಡ ಘಟನೆ ಕುಣಿಗಲ್ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ-7ರ ಬಿ.ಎಂ.ಬೇಗೂರು ಬಳಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.

ಮೃತಪಟ್ಟವರನ್ನು ರಾಮಯ್ಯ(ರಘು) (38), ಹೆಬ್ಬಾಳ ಬಿ.ಎಲ್.ಸರ್ಕಲ್ ವಿಜಯ್(36), ಹಾಗೂ ಸಂತೋಷ ಎಂದು ಗರುತಿಸಲಾಗಿದೆ.
ಕಾರು ಚಾಲಕ ಲೋಕೇಶ್ ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ವಸಂತ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.