ತುಮಕೂರು : ಕರ್ನಾಟಕ ಸರ್ಕಾರದ ನಿರ್ದೇಶನದಂತೆ ತುಮಕೂರು ಜಿಲ್ಲಾಡಳಿತ ವತಿಯಿಂದ ಮೇ 28ರಂದು ಏಕಕಾಲದಲ್ಲಿ ತುಮಕೂರು ಜಿಲ್ಲೆಯ ಜಿಲ್ಲಾ ಕೇಂದ್ರ, ಮಧುಗಿರಿ ಟೌನ್ ಮತ್ತು ಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ 75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ಅಮೃತ ಭಾರತಿಗೆ ಕನ್ನಡದ ಆರತಿ” ಶೀರ್ಷಿಕೆಯಡಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ತುಮಕೂರು ನಗರದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಅಶೋಕ ರಸ್ತೆಯ ಸ್ವಾತಂತ್ರ್ಯ ಚೌಕದಿಂದ ಭಾರತಾಂಬೆಯ ಪುತ್ಥಳಿಯನ್ನು ಬೆಳ್ಳಿರಥದಲ್ಲಿರಿಸಿ, ಜಾನಪದ ಕಲಾತಂಡಗಳ ಮೆರವಣಿಗೆಯಲ್ಲಿ ಬಿ.ಜಿ.ಎಸ್. ವೃತ್ತಕ್ಕೆ ಕರೆತರಲಾಗುವುದು. ತುಮಕೂರು ಮಹಾನಗರಪಾಲಿಕೆ ಆವರಣದಲ್ಲಿ(ಬಿ.ಜಿ.ಎಸ್. ವೃತ್ತದ ರಸ್ತೆಯಲ್ಲಿ) ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ನಗರ ಶಾಸಕರಾದ ಶ್ರೀ ಜಿ.ಬಿ. ಜ್ಯೋತಿ ಗಣೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಶ್ರೀ ರೋಹಿತ್ ಚಕ್ರತೀರ್ಥ, ಮಾನ್ಯ ಅಧ್ಯಕ್ಷರು, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ, ಬೆಂಗಳೂರು ಅವರು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಮಲ್ಲಿಕಾರ್ಜುನ ಕೆಂಕೆರೆ, ತುಮಕೂರು ಅವರಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಹಾಗೂ ಕಾರ್ಯಕ್ರಮದ ಕೊನೆಯಲ್ಲಿ “ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರ್ನಾಟಕದ ಕೊಡುಗೆ” ಕುರಿತ ಸಾಕ್ಷ್ಯ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಅಂದು ಮಧುಗಿರಿ ಟೌನ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ತಾಲ್ಲೋಕ್ ಆಡಳಿತದ ವತಿಯಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಪೂರ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ನಗರದ ಡೂಮ್ ಲೈಟ್ ವೃತ್ತದಿಂದ ಮೆರವಣಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಂತರ 11 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸ್ಥಳೀಯ ಶಾಸಕರಾದ ಶ್ರೀ ಎಂ.ವಿ.ವೀರಭದ್ರಯ್ಯ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಖ್ಯಾತ ಅಂಕಣಕಾರರಾದ ವಿಕಾಸ್ ಪುತ್ತೂರು ಅವರು ಉಪನ್ಯಾಸ ನೀಡಲಿದ್ದಾರೆ ಹಾಗೂ ಕಾರ್ಯಕ್ರಮದ ಕೊನೆಯಲ್ಲಿ “ ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರ್ನಾಟಕದ ಕೊಡುಗೆ” ಕುರಿತ ಸಾಕ್ಷ್ಯ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಹಾಗೂ ಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲ್ಲೋಕ್ ಆಡಳಿತದಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಪೂರ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಸುವರ್ಣ ಮುಖಿ ಸೇತುವೆ ಬಳಿಯಿಂದ ಮೆರವಣಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಂತರ 11 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸ್ಥಳೀಯ ಶಾಸಕರಾದ ಡಾ: ಸಿ.ಎಂ.ರಾಜೇಶ್ ಗೌಡ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಖ್ಯಾತ ಸಾಮಾಜಿಕ ಕಾರ್ಯಕರ್ತರಾದ ರಾಧಾ ಕೃಷ್ಣ ಹೊಳ್ಳ ಅವರು ಉಪನ್ಯಾಸ ನೀಡಲಿದ್ದಾರೆ. ಹಾಗೂ ಕಾರ್ಯಕ್ರಮದ ಕೊನೆಯಲ್ಲಿ “ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರ್ನಾಟಕದ ಕೊಡುಗೆ” ಕುರಿತ ಸಾಕ್ಷ್ಯ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳು, ದಲಿತಪರ ಸಂಘಟನೆಗಳು, ಸ್ತ್ರೀ ಶಕ್ತಿ ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.