ಜೂನ್ 26ಕ್ಕೆ ಕಾಂಗ್ರೆಸ್ ಪಕ್ಷದಿಂದ ನವ ಸಂಕಲ್ಪ ಶಿಬಿರ ಆಯೋಜನೆ -ಮಾಜಿ ಶಾಸಕ ರಫೀಕ್ ಅಹ್ಮದ್.

ತುಮಕೂರು_ಜೂನ್ 26ರಂದು ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾಮಟ್ಟದ ನವ ಸಂಕಲ್ಪ ಶಿಬಿರವನ್ನು ಆಯೋಜನೆ ಮಾಡಿರುವುದಾಗಿ ತುಮಕೂರು ನಗರ ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಿಂದ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜೂನ್ 26ರಂದು ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿರುವ ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜಸ್ಥಾನದಲ್ಲಿ ಎಐಸಿಸಿ ಮಟ್ಟದ ಚಿಂತನ-ಮಂಥನ ಶಿಬಿರ ಆಯೋಜನೆಗೊಂಡಿತ್ತು ನಂತರ , ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುವ ಸಲುವಾಗಿ ಶಿಬಿರ ಆಯೋಜಿಸಲಾಗಿತ್ತು ಅದರ ಮುಂದುವರಿದ ಭಾಗವಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದ್ದು ತುಮಕೂರಿನಲ್ಲಿ ಸಹ ಜೂನ್ 26ರಂದು ಶಿಬಿರ ನಡೆಯಲಿದೆ ಎಂದು ತಿಳಿಸಿದರು.

ನವ ಸಂಕಲ್ಪ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಹಾಲಿ,ಮಾಜಿ ಶಾಸಕರು ಪಕ್ಷದ ಮುಖಂಡರು ಕಾರ್ಯಕರ್ತರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಇನ್ನು ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದ್ದು ಅವುಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಜಿಲ್ಲೆಯಲ್ಲಿ ಭದ್ರಗೊಳಿಸಲು ಶಿಬಿರ ನಡೆಸಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *