ತುಮಕೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟ, ಜಿಲ್ಲಾ ಜಾನಪದ ಮತ್ತು ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ಸಹಯೋಗದಲ್ಲಿ ಮೇ 9ರ ಬೆಳಿಗ್ಗೆ 9.30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಮಂಚಗೇನಹಳ್ಳಿ ರಾಜ್ಯ ಮಟ್ಟದ ಕಲಾವಿದ ದಿ|| ಎಂ.ಪಿ. ಶಶಿಧರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ದಿ|| ಡಿ. ಮಂಜುನಾಥ ಅವರ “ನುಡಿನಮನ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ.
ಜಿಲ್ಲಾ ಬೀದಿ ನಾಟಕ ಒಕ್ಕೂಟದ ಅಧ್ಯಕ್ಷ ಮಂಜುನಾಥ ದಾಸರಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ರಾಜ್ಯ ಬೀದಿ ನಾಟಕ ಒಕ್ಕೂಟದ ಅಧ್ಯಕ್ಷ ಗ್ಯಾರಂಟಿ ರಾಮಣ್ಣ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್. ಶ್ರೀನಿವಾಸ್, ಬಿ.ಸುರೇಶ್‍ಗೌಡ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್.ಮಮತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ಎಂ. ರವಿಕುಮಾರ್, ಡಿಹೆಚ್‍ಓ ಡಾ: ನಾಗೇಂದ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿರುತ್ತಾರೆ.