ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಾಜಿ ಸಚಿವರು

ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವ ಜನರಿದ್ದಾರೆ, ನಿಜಕ್ಕೂ ಹೇಳ ಬೇಕೆಂದರೆ ಉತ್ತಮ ಚಿಕಿತ್ಸೆ ದೊರೆಯುವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ. ಇದಕ್ಕೆ ಒತ್ತು ನೀಡುವಂತೆ ಮಾಜಿ ಸಚಿವರಾದ ಸೊಗಡು ಶಿವಣ್ಣನವರು ಇಂದು ತುಮಕೂರಿನ ಜನರಲ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ಜನರಿಗೆ ಒಂದು ವಿಶ್ವಾಸವನ್ನು ಮೂಡಿಸಿದ್ದಾರೆ.
ತುಮಕೂರಿನ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಕಣ್ಣಿನ ಕಾಂಟ್ರಾಕ್ಟ್ ಶಸ್ತ್ರ ಚಿಕಿತ್ಸೆಯನ್ನು ನೇತ್ರ ತಜ್ಞರಾದ ಡಾ.ಮಂಜುನಾಥ್ ಮತ್ತು ಡಾ.ದಿನೇಶ್ ಅವರು ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ವೀರಭದ್ರಯ್ಯ ಉಪಸ್ಥಿತರಿದ್ದರು.
ಮಾಜಿ ಸಚಿವರಾದ ಸೊಗಡು ಶಿವಣ್ಣನವರು ಜನರಲ್ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗುವುದರ ಮೂಲಕ ಸರ್ಕಾರಿ ಆಸ್ಪತ್ರೆಗಳು ಜನಪರ ಮತ್ತು ಜೀವಪರ ಇವೆ, ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಪಡೆಯಿರಿ ಎಂಬ ಸಂದೇಶವನ್ನು ತಮಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವುದರ ಮೂಲಕ ರವಾನಿಸಿದ್ದಾರೆ.
ಅವರಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರಿಗೆ ಅಭಿನಂದಿಸಿರುವ ಶಿವಣ್ಣನವರು, ಜನತೆ ಸರ್ಕಾರದ ಸೌಲಭ್ಯವನ್ನು ಪಡೆಯಲು ಮನವಿ ಮಾಡಿದ್ದಾರೆ.
ತುಮಕೂರು ಜನರಲ್ ಆಸ್ಪತ್ರೆಯ ವಿಭಾಗಗಳಲ್ಲಿ ಉತ್ತಮ ತಜ್ಞ ವೈದ್ಯರುಗಳಿದ್ದಾರೆ,

Leave a Reply

Your email address will not be published. Required fields are marked *