ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸರ್ವೋದಯ ಶಿಕ್ಷಣ ಸಂಸ್ಥೆ(ರಿ) ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಮೇ 19, 2022ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೊರಪೇಟೆಯ ಸರ್ವೋದಯ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್ ಅವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರ