ಕೆವಿಕೆ ಪರಿಶ್ರಮದಿಂದ ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳಲ್ಲಿ ಶೆ.15ರಷ್ಟು ಇಳುವರಿ ಹೆಚ್ಚಳ


ತುಮಕೂರು, ಏ.28 ಕೃಷಿ ವಿಜ್ಞಾನ ಕೇಂದ್ರದ ಪರಿಶ್ರಮದಿಂದ ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳಲ್ಲಿ ಶೇ. 10 ರಿಂದ 15ರಷ್ಟು ಇಳುವರಿ ಹೆಚ್ಚಳವಾಗಿದೆ ಎಂದು ಸಂಸದ ಜಿ.ಎಸ್. ಬಸವರಾಜು ಅವರು ತಿಳಿಸಿದರು.

ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರೈತ ಮತ್ತು ವಿಜ್ಞಾನಿ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಯುವವರ ಪ್ರಮಾಣ ಹೆಚ್ಚಾಗುತ್ತಿದ್ದು, ಇದರಿಂದ ರೈತರು ತಮ್ಮ ಆದಾಯವನ್ನು ವೃದ್ಧಿಸಿಕೊಳ್ಳುತ್ತಿದ್ದಾರೆ. ಕೃಷಿ ವಿಜ್ಞಾನ ಕೇಂದ್ರವು ಪ್ರಮುಖ ಎಣ್ಣೆಕಾಳು ಬೆಳೆಯಾದ ನೆಲಗಡಲೆಯೊಂದಿಗೆ ಕಣ್ಮರೆಯಾಗಿರುವ ಎಳ್ಳು, ಹುಚ್ಚೆಳ್ಳು ಸೇರಿದಂತೆ ಮತ್ತಿತರ ಎಣ್ಣೆಕಾಳು ಬೆಳೆಗಳ ಪ್ರದೇಶವಾರು ವಿಸ್ತರಣೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ರೈತರು ಕೆವಿಕೆಯಿಂದ ನೀಡುವ ಸಲಹೆಗಳನ್ನು ಅನುಸರಿಸಿ ಕೃಷಿಯಲ್ಲಿ ಪ್ರಗತಿ ಸಾಧಿಸಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ, ನಬಾರ್ಡ್ ಡಿಡಿಎಂ ಕೀರ್ತಿ ಪ್ರಭಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಡಿ. ಯೆಲ್ಲೂರ್ಕರ್, ಕೆವಿಕೆ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತರಾದ ಕೊರಟಗೆರೆಯ ಮಹೇಶ್, ಮಧುಗಿರಿಯ ಮಹಾಲಿಂಗಪ್ಪ, ತುಮಕೂರಿನ ಸೈಯದ್ ಹಾಗೂ ಚೆನ್ನಕೇಶವ ಅವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *