ಗುಬ್ಬಿ: ಮಾಜಿ ಕೃಷಿ ಸಚಿವ ದಿವಂಗತ ಸಾಗರನಹಳ್ಳಿ ರೇವಣ್ಣರವರ ಮಗ ಸಹಕಾರಿ ಧುರೀಣ, ಸಾಗರನಹಳ್ಳಿಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿಲ್ಲಾ ಕೃಷಿ ಸಮಾಜದ ನಿರ್ದೇಕರಾದ ಎಸ್.ಆರ್.ಸಿದ್ದೇಶ್ವರ್ (70) ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು.
ಸಹೋದರರಾದ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್, ಕೈಗಾರಿಕೋದ್ಯಮಿ ನಾಗರನಹಳ್ಳಿ ಪ್ರಭು ಹಾಗೂ ಪತ್ನಿ, 4 ಜನ ಹಣ್ಣುಮಕ್ಕಳು ಮತ್ತು ಬಿ ಜೆ ಪಿ ಜಿಲ್ಲಾಧ್ಯಕ್ಷ ಹೆಬ್ಬಾರ ರವಿಶಂಕರ್ ಮತ್ತು ಪಂಚಾಯತ್ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಡಶೆಟ್ಟಿಹಳ್ಳಿ ಸತೀಶ್ ರವರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನ ಸಾಗರನಹಳ್ಳಿ ಅವರ ಗೃಹದಲ್ಲಿ ವ್ಯವಸ್ಥೆ ಮಾಡಲಾಗಿತ್ತು, ಮಧ್ಯಾಹ್ನ 2:30 ರ ಇವರ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಕರ್ನಾಟಕ ರಾಜ್ಯ ಕಾನೂನು ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ನೊಳಂಬ ವೀರಶೈವ ಸಮಾಜದ ರಾಜ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಚಲನಚಿತ್ರ ವಾಣಿಜ್ಯ, ಮಂಡಳಿಯ ಉಪಾಧ್ಯಕ್ಷ ಉಮೇಶ್ ಬಣಕಾರ್, ತಿಪಟೂರು ಮಾಜಿ ಶಾಸಕರಾದ ಷಡಕಕ್ಷರಿ ಗುಬ್ಬಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮುಖಂಡರುಗಳಾದ ಎಸ್.ಡಿ.ದಿಲೀಪ್ ಕುಮಾರ್, ಪಿ.ಬಿ.ಚಂದ್ರಶೇಖರ್ ಬಾಬು, ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಚಂದ್ರಶೇಖರ ಹಾಗೂ ಅಪಾರ ಸಂಖ್ಯೆಯಲ್ಲಿ ವೀರಶೈವ ಮುಖಂಡರು ಮೃತರ ಅಂತಿಮ ದರ್ಶನ ಪಡೆದರು.