ತುಮಕೂರು:2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವಕ್ಕೆ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮೇ 16, 2022 ರಂದು 12.30ಕ್ಕೆ ನಗರ ಎಂಪ್ರೆಸ್ ಪಬ್ಲಿಕ್ ಶಾಲೆಯಲ್ಲಿ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಸಚಿವರುಗಳಾದ ಅರಗ ಜ್ನಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಬಿ.ಸಿ. ನಾಗೇಶ್ ಅವರು ಉಪಸ್ಥಿತರಿರುವರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ವಹಿಸುವರು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರಾದ ಡಾ. ವೈ.ಎ ನಾರಾಯಣಸ್ವಾಮಿ, ಸಂಸದರಾದ ಜಿ.ಎಸ್. ಬಸವರಾಜು, ಮತ್ತು ಡಿ.ಕೆ. ಸುರೇಶ್ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ರಾಕೇಶ್ ಸಿಂಗ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್. ಸೆಲ್ವಕುಮಾರ್, ಸಾ.ಶಿ.ಇ ಆಯುಕ್ತರಾದ ಡಾ. ವಿಶಾಲ್ ಆರ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಪಲ್ಲವಿ ಅಕುರಾತಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಡಾ. ವೈಎಸ್. ಪಾಟೀಲ, ಜಿ.ಪಂ. ಸಿಇಓ ಡಾ. ಕೆ. ವಿದ್ಯಾಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್ ವಾಡ್ ಇವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.