ದಲಿತ ಮಹಿಳೆ ಕೊಲೆ ಗೈದಿದ್ದ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು : ದಲಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದ ಆರೋಪಿಗಳಿಗೆ 14 ವರ್ಷಗಳ ನಂತರ ತುಮಕೂರಿನ 3ನೇ ಅಧಿಕ ಸತ್ರ ನ್ಯಾಯಾಲಯ 21 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2010ರಲ್ಲಿ ಜೂನ್ 28ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿಯ ಗೋಪಾಲಪುರ ಗ್ರಾಮದ ಡಾಬಾ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಸಾಯಿಸಿದ್ದ ಪ್ರಕರಣದಲ್ಲಿ 27 ಆರೋಪಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು, ಅದರಲ್ಲಿ 6 ಆರೋಪಿಗಳು ಸಾವನ್ನಪ್ಪಿದ್ದಾರೆ.

ಉಳಿದ 21ಆರೋಪಿಗಳ ಅಪರಾಧ ಸಾಭೀತಾದ ಹಿನ್ನೆಲೆಯಲ್ಲಿ 3ನೇ ಅಧಿಕ ಸತ್ರ ನ್ಯಾಯಾಲಯ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5000 ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರಾದ ಎ.ನಾಗಿರೆಡ್ಡಿ ತೀರ್ಪು ನೀಡಿದ್ದಾರೆ.

ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದ ಹಿನ್ನೆಲಯಲ್ಲಿ ಈ ಸಂಬಂಧ ಪೆÇಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.

ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ 2010ರಲ್ಲಿ ಜೂನ್ 28ರಂದು ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪುನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ರಂಗನಾಥ, ಮಂಜುಳಾ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ ಮೀಸೆ, ಹನುಮಂತಯ್ಯ ಗಂಗಾಧರ್ (ನಾಗರಾರ್ಜುನ), ಸತ್ಯಪ್ಪ-ಸತೀಶ್ (ಪರಿಶಿಷ್ಟ ಜಾತಿ), ಚಂದ್ರಶೇಖರ್ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ,್ಮ ಮಂಜಣ್ಣ ಮಂಜು, ಸ್ವಾಮಿ (ಮೋಹನ್ ಕುಮಾರ್).ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ ರಾಮಯ್ಯ ದಾಸಪ್ಪ ಬುಳ್ಳೆ ಹನುಮಂತಯ್ಯ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ 6ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *