ತುಮಕೂರು ವಿವಿಯಲ್ಲಿ 17ನೇ ಕನ್ನಡ ವಿಜ್ಞಾನ ಸಮ್ಮೇಳನ

ತುಮಕೂರು : ತುಮಕೂರು ವಿಶ್ವವಿದ್ಯಾನಿಲಯವು ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಇವರ ಸಹಭಾಗಿತ್ವದಲ್ಲಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಇದೇ ಅಕ್ಟೋಬರ್ 27 ರಿಂದ 29ರ ವರೆಗೂ ‘17ನೇ ಕನ್ನಡ ವಿಜ್ಞಾನ ಸಮ್ಮೇಳನ’ವನ್ನು ಆಯೋಜಿಸಲಾಗಿದೆ ಎಂದು ಕುಲಪತಿಗಳಾದ ಡಾ||ವೆಂಕಟೇಶ್ವರಲು ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಕ್ಟೋಬರ್ 27ರ ಬೆಳಗ್ಗೆ 9:30 ಗಂಟೆಗೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು 17ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ತುಮಕೂರಿನ ಶ್ರೀ ಸಿದ್ಧಗಂಗಾ ಕ್ಷೇತ್ರದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜೀ ಅವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಕೆ. ಎನ್. ರಾಜಣ್ಣ, ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ಜಿ. ಎಸ್. ಬಸವರಾಜು, ತುಮಕೂರು ನಗರ ಶಾಸಕ ಜಿ. ಬಿ. ಜ್ಯೋತಿ ಗಣೇಶ್, ಶಾಸಕ ಟಿ. ಬಿ. ಜಯಚಂದ್ರ, ಸ್ವದೇಶಿ ವಿಜ್ಞಾನ ಆಂದೋಳನದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿವಿ ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಭಾಗವಹಿಸಲಿದ್ದಾರೆ. ವಿಜ್ಞಾನಿ ಡಾ. ಬಿ. ಎನ್. ಸುರೇಶ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

2023ನೇ ಸಾಲಿನ ಭಾರತರತ್ನ ಡಾ. ಎಂ. ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರವನ್ನು ಬೆಂಗಳೂರಿನ DEBEL,ಡಿ.ಆರ್.ಡಿ.ಓ. ನಿರ್ದೇಶಕರಾದ ಡಾ. ಟಿ. ಎಂ. ಕೊಟ್ರೇಶ್ ಅವರಿಗೆ, ಡಾ. ಭೀಮ್‍ಸೇನ್ ಜೋಶಿ ಸಾಂಸ್ಕøತಿಕ ವಿಜ್ಞಾನ ಪುರಸ್ಕಾರವನ್ನು ಕರ್ನಾಟಕ ಸಂಗೀತ ವಿದ್ವಾಂಸರಾದ ವಿದ್ವಾನ್ ಶ್ರೀ ಎಸ್. ಶಂಕರ್ ಅವರಿಗೆ, ಡಾ. ಸಿ. ಎನ್. ಆರ್. ರಾವ್ ವಿಜ್ಞಾನ ಪುರಸ್ಕಾರವನ್ನು ಹಿರಿಯ ವಿಜ್ಞಾನಿ ಹಾಗೂ ಐ.ಐ.ಎಸ್.ಸಿ. ಪ್ರಾಧ್ಯಾಪಕರಾದ ಡಾ. ಎಂ. ಎಂ. ನಾಯಕ್ ಅವರಿಗೆ ನೀಡಿ ಗೌರವಿಸಲಾಗುತ್ತಿದೆ ಎಂದರು.

ಈ ಸಮ್ಮೇಳನದಲ್ಲಿ ನಮ್ಮ ರಾಜ್ಯದ 300ಕ್ಕೂ ಹೆಚ್ಚು ವಿಜ್ಞಾನಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಂದ ವೈಜ್ಞಾನಿಕ ಲೇಖನ-ಪ್ರಬಂಧಗಳನ್ನು ಕನ್ನಡದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಶಸ್ವಿ ಚಂದ್ರಯಾನವನ್ನು ಸಾಧಿಸಿರುವ ದೇಶದ ಪ್ರತಿಷ್ಠಿತ ಇಸ್ರೋ ಸಂಸ್ಥೆಯ “ಸ್ಪೇಸ್ ಅನ್ ವೀಲ್ಸ್” ಸಾಧನೆಗಳ ಪ್ರದರ್ಶನವನ್ನು 3 ದಿನಗಳ ಕಾಲ ಸಮ್ಮೇಳನಾವಧಿಯಲ್ಲಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಪ್ರದರ್ಶನವನ್ನು ವೀಕ್ಷಿಸಲು ಮುಕ್ತ ಅವಕಾಶವಿರುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *