ಜಿಲ್ಲೆಯಲ್ಲಿ 190 ಡೆಂಗ್ಯೂ ಪ್ರಕರಣ ವರದಿ

ತುಮಕೂರು : ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಜುಲೈ 9ರವರೆಗೆ ಒಟ್ಟು 190 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಡಿ.ಎನ್. ಮಂಜುನಾಥ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜುಲೈ 9ರಂದು ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ 43 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 46 ಸೇರಿ ಒಟ್ಟು 89 ರಕ್ತ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಒಳರೋಗಿಗಳಾಗಿ ಸರ್ಕಾರಿ ಆಸ್ಪತ್ರೆಯಲ್ಲಿ 3 ಮಂದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 6 ಮಂದಿ ಸೇರಿ ಒಟ್ಟು 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *