ತುಮಕೂರಿಗೆ ರೂ. 70 ಕೋಟಿ ರೂ. ವೆಚ್ಚದ ಕಾರ್ಡಿಯಾಲಜಿ ಕೇಂದ್ರ-ಸಚಿವ ಪರಮೇಶ್ವರ

ತುಮಕೂರು : ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು. ಹೃದ್ರೋಗ ಸಮಸ್ಯೆಯಿದ್ದವರು ತುಮಕೂರು ಜಿಲ್ಲೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಲು ಕನಿಷ್ಟ 2 ತಾಸು ಬೇಕಾಗುತ್ತದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಸಾವನ್ನಪ್ಪುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸುವುದರಿಂದ ಜಿಲ್ಲೆಯ ಜನರಿಗೆ ಮಾತ್ರವಲ್ಲದೇ ಶಿವಮೊಗ್ಗ, ಹಾಸನ, ಚಿತ್ರದುರ್ಗ ಮುಂತಾದ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ ಎಂದರು.

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಂತರ ಮಾತನಾಡಿ ಸಚಿವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಸ್ಪತ್ರೆಯು ಕಲ್ಲಿನ ಕಟ್ಟಡವಾಗಿದ್ದು, ತುಂಬಾ ಹಳೆಯದಾಗಿದೆ. ಜಿಲ್ಲಾಸ್ಪತ್ರೆಗೆ ಆಧುನಿಕ ರೂಪ ನೀಡಿ ಸುಸಜ್ಜಿತಗೊಳಿಸಲು 130 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದರಲ್ಲದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ವಸತಿ ನಿಲಯ ನಿರ್ಮಿಸಲು 50 ಕೋಟಿ ರೂ. ಗಳ ಅನುದಾನವನ್ನು ಒದಗಿಸಲು ಒಪ್ಪಿದ್ದಾರೆ. ಇದಕ್ಕಾಗಿ ತುಮಕೂರು ವಿಶ್ವವಿದ್ಯಾನಿಲಯದ ಆವರಣದೊಳಗೆ ಸ್ಥಳವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

   ಶೈಕ್ಷಿಣಿಕ ನಗರವೆನಿಸಿಕೊಂಡಿರುವ ತುಮಕೂರಿನಲ್ಲಿ ಬಹುತೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪೂರಕವಾದ ಹಾಸ್ಟೆಲ್ ವ್ಯವಸ್ಥೆಗಳಿಲ್ಲ. ಈಗಿರುವ ಹಾಸ್ಟೆಲ್‌ಗಳು ಸಾಲುತ್ತಿಲ್ಲ. ಜಿಲ್ಲೆಯಲ್ಲಿ   50 ಕೋಟಿ ರೂ. ವೆಚ್ಚದಲ್ಲಿ 12 ನೂತನ ಹಾಸ್ಟೆಲ್‌ಗಳನ್ನು ನಿರ್ಮಿಸಲು   ಶೀಘ್ರದಲ್ಲಿ ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದರು.


  ಮುಂದಿನ ದಿನಗಳಲ್ಲಿ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ 3000 ಹಾಗೂ ಗುಬ್ಬಿ ತಾಲೂಕಿನ ಎಚ್‌ಎಎಲ್ ಘಟಕದಲ್ಲಿ 6500ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರಲ್ಲದೆ   ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿರುವ  ತುಮಕೂರು ಜಿಲ್ಲೆಗೆ   ಸವಲತ್ತು ನೀಡುವ ಅವಶ್ಯಕತೆ ಇದ್ದು, ನಮ್ಮ ಸರ್ಕಾರವು  ಜಿಲ್ಲೆಯ   ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದರು. 


    ಮಹಾನಗರ ಪಾಲಿಕೆ ವ್ಯಾಪ್ತಿಯ ಕೇವಲ 6 ವಾರ್ಡ್ಗಳನ್ನು ಮಾತ್ರ ಸ್ಮಾರ್ಟ್ ಸಿಟಿ ಯೋಜನೆಗೊಳಪಡಿಸಿ ಅಭಿವೃದ್ಧಿಪಡಿಸಲಾಗಿದೆ.  ಉಳಿದ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 100 ಕೋಟಿ ರೂ.ಗಳನ್ನು ವಿನಿಯೋಗಿಸಲು ತೀರ್ಮಾನಿಸಲಾಗಿದೆ ಎಂದು ನುಡಿದರು.
  ಗುಬ್ಬಿ ರಸ್ತೆಯಲ್ಲಿರುವ ಭೀಮಸಂದ್ರದ ಸೇತುವೆಯನ್ನೂ ಸಹ ಅಗಲೀಕರಣಗೊಳಿಸುವ ಕಾಮಗಾರಿಯನ್ನು ಸದ್ಯದಲ್ಲೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

  ಬಡವರು ಬಡವರಾಗಿಯೇ ಉಳಿಯಬಾರದೆಂಬ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಯಾವುದೇ ರಾಜಕಾರಣವಿಲ್ಲ.  ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ ಎಂಬ ಟೀಕೆಗಳು ಬರುತ್ತಲೇ ಇವೆ.  ಇತ್ತೀಚೆಗಷ್ಟೇ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಚಾಲನೆ ನೀಡಿದ ಎತ್ತಿನಹೊಳೆ ಮೊದಲ ಹಂತದ ಯೋಜನೆಯು ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಿಡಿದ ಕೈಗನ್ನಡಿಯಾಗಿದೆ.  ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
  ತುಮಕೂರಿಗೆ ಮೆಟ್ರೋ ರೈಲು ಸಂಚಾರ ಸೌಲಭ್ಯವನ್ನು ತರುವ ನಿಟ್ಟಿನಲ್ಲಿ ವಿಸ್ತೃತ ವರದಿಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ನೀಡಲಾಗುವುದೆಂದರು. 

  ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ವಸಂತನರಸಾಪುರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದ ನಂತರ ಎಸ್ ಮಾಲ್ ಬಳಿಯಿರುವ ಈ ಸೇತುವೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು.  ಈ ಸೇತುವೆ ಪುನರ್ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರಕ್ಕೆ ಅನುವಾಲಿದೆ ಎಂದರಲ್ಲದೆ  ನಿಗಧಿತ ಅವಧಿಯೊಳಗೆ ಗುಣಮಟ್ಟದ ಸೇತುವೆ ನಿರ್ಮಾಣ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ನಾರಾಯಣಪ್ಪ ಅವರನ್ನು ಅಭಿನಂದಿಸಿದರು.

    ಶಾಸಕ ಬಿ. ಸುರೇಶ್‌ಗೌಡ ಮಾತನಾಡಿದರು.        ಜಿ.ಬಿ. ಜ್ಯೋತಿಗಣೇಶ್  ಅಧ್ಯಕ್ಷತೆ ವಹಿಸಿದ್ದರು.

ಶಿರಾ ಗೇಟ್ ರಸ್ತೆ – ಸಂಚಾರಕ್ಕೆ ಮುಕ್ತ –

ಕಳೆದೈದು ತಿಂಗಳಿAದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಇಂದಿನಿAದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.
ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 6.65 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟಿçÃಯ ಹೆದ್ದಾರಿ 4ರ ಸೇತುವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವುಗಳು ಸಂಭವಿಸುತ್ತಲೇ ಇದ್ದವು. ಕಿರಿದಾಗಿದ್ದ ಈ ಸೇತುವೆಯನ್ನು ಅಗಲೀಕರಣಗೊಳಿಸಿ, ಹೊಸ ಸೇತುವೆಯನ್ನು ನಿರ್ಮಿಸಬೇಕೆಂದು ಈ ಭಾಗದ ಜನರು, ಜನಪ್ರತಿನಿಧಿಗಳಿಂದ ಬಹು ದಿನಗಳ ಬೇಡಿಕೆಯಿತ್ತು. ರಾಜ್ಯದ 15 ಜಿಲ್ಲೆ ಸೇರಿ ಜಿಲ್ಲೆಯ ಪಾವಗಡ, ಕೊರಟಗೆರೆ, ಶಿರಾ, ಮಧುಗಿರಿ ಭಾಗಕ್ಕೆ ಇದೇ ರಸ್ತೆಯಿಂದ ತೆರಳಬೇಕಿತ್ತು. ರಸ್ತೆ ಕಾಮಗಾರಿ ಕೈಗೊಂಡ ನಂತರ ವಾಹನಗಳು ಬಳಸಿಕೊಂಡು ಹನುಮಂತಪುರ ಮೂಲಕ ಸಾಗಬೇಕಿತ್ತು. ಈಗ ಸೇತುವೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡಿರುವುದರಿAದ ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಹುಲಿ ನಾಯ್ಕರ್, ಮಾಜಿ ಸಚಿವ ರೇವಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮಂಜಪ್ಪ, ಅಧೀಕ್ಷಕ ಇಂಜಿನಿಯರ್ ಜಿ.ಸಿ. ಜಗಧೀಶ್, ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್, ಅಪರ ಜಿಲ್ಲಾಧಿಕಾರಿ ಡಾ: ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತ ಎಸ್.ನಾಗಣ್ಣ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *