ತುಮಕೂರು : ತುಮಕೂರು ದಸರಾ ಉತ್ಸವದ ಆರಂಭದಿಂದ ವಿಜಯದಶಮಿ ಜಂಬೂಸವಾರಿ ಸಂಪೂರ್ಣವಾಗಿ ಮುಗಿಯುವ ತನಕ ತುಮಕೂರು ದಸರಾ ಉತ್ಸವದ ಅಂಗವಾಗಿ ಆಯೋಜಿಸಿದ್ದ ಎಲ್ಲಾ ಸಾಂಸ್ಕøತಿಕ, ಧಾರ್ಮಿಕ, ಕ್ರೀಡೆ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಸಹಕರಿಸಿದ ಸುದ್ದಿ ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿನಂದನೆ ತಿಳಿಸಿದ್ದಾರೆ.
ವಾರ್ತಾ ಇಲಾಖೆಗೆ ಮೆಚ್ಚುಗೆ :-
ತುಮಕೂರು ದಸರಾ ಮಹೋತ್ಸವದ ಅಂಗವಾಗಿ ಜರುಗಿದ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳೊಂದಿಗೆ ಉತ್ತಮ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದ ಹಾಗೂ ಪ್ರಚಾರ ಸಮಿತಿ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ವಾರ್ತಾ ಇಲಾಖೆಯ ವಾರ್ತಾಧಿಕಾರಿ ಹಿಮಂತರಾಜು ಜಿ. ಅವರಿಗೂ ಜಿಲ್ಲಾಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ.