ತುಮಕೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾಡಳಿತದ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಗೃಹ ಕಚೇರಿ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ತುಮಕೂರಿನಲ್ಲಿ ಆಯೋಜಿಸಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಈ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಅಗತ್ಯ ಪೂರ್ವ ಸಿದ್ಧತೆಯನ್ನು ನಡೆಸಲಾಗುತ್ತಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಮುಖ್ಯಮಂತ್ರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ. ಪುರುμÉೂೀತ್ತಮ್ ಹಾಗೂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅನು ಶಾಂತರಾಜು, ಟಿ. ಎನ್. ಮಧುಕರ್ , ಡಿ.ಎಂ. ಸತೀಶ್ ಮತ್ತು ಪದಾಧಿಕಾರಿಗಳು ಆಹ್ವಾನ ನೀಡಿದರು.
ಆಹ್ವಾನಕ್ಕೆ ಸ್ಪಂದಿಸಿದ ಮುಖ್ಯ ಮಂತ್ರಿಗಳು ಜನವರಿಯಲ್ಲಿ ಸಮ್ಮೇಳನ ಆಯೋಜಿಸುವಂತೆ ಸಲಹೆ ನೀಡಿ ಅಗತ್ಯ ಸಹಕಾರದ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಹಿಮಂತರಾಜು ಜಿ., ಕ್ರೀಡಾ ಸಮಿತಿ ಮುಖ್ಯ ಸಂಚಾಲಕರಾದ ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್, ಎಸ್. ಹರೀಶ್ ಆಚಾರ್ಯ ಹಾಜರಿದ್ದರು.