ಕೇಂದ್ರ ಬಜೆಟ್ : ರಾಜ್ಯಗಳಿಗೆ ಬಡ್ಡಿ ರಹಿತ ಸಾಲ, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ

ರಾಜ್ಯಗಳಿಗೆ 1.5 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ,ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ,12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸೇರಿದಂತೆ ಹಣಕಾಸು ಸಚಿವರಾದ ನಿರ್ಮಲ ಸೀತರಾಮನ್ ಕೇಂದ್ರ ಬಜೆಟ್ ಮಂಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದರು.
ತಮ್ಮ ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.

ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. “ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು” ಎಂದು ಅವರು ಹೇಳುತ್ತಾರೆ.
ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಆದಾಯ ತೆರಿಗೆದಾರರಿಗೆ ನಿರ್ಮಲಾ ಸೀತಾರಾಮನ್ ಭರ್ಜರಿ ಸಿಹಿಸುದ್ದಿ ನೀಡಿದ್ದು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ.

ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.

ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ಶೂರೆನ್ಸ್ ವಲಯಗಳಲ್ಲಿ ಎಫ್ ಡಿಐ ಹೆಚ್ಚಳ ಮಾಡಲಾಗುವುದು ಗ್ರಾಮೀಣ ಪ್ರದೇಶಗಳಲ್ಲೂ ಇಂಡಿಯಾ ಪೋಸ್ಟ್ ಪೇಮೆಂಟ್ ಜಾರಿಗೆ ತಲಾಗುವುದು ಎಂದು ತಿಳಿಸಿದ್ದಾರೆ.

ವಿಮಾ ವಲಯದ ಎಫ್‌ಡಿಐ ಮಿತಿಯನ್ನು ಶೇ. 74 ರಿಂದ 100 ಕ್ಕೆ ಹೆಚ್ಚಿಸಲಾಗುವುದು. ಈ ವರ್ಧಿತ ಮಿತಿಯು ಭಾರತದಲ್ಲಿ ಸಂಪೂರ್ಣ ಪ್ರೀಮಿಯಂ ಅನ್ನು ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ಗಾರ್ಡ್‌ರೈಲ್‌ಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುವುದು ಮತ್ತು ಸರಳಗೊಳಿಸಲಾಗುವುದು” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಗಳ ಬೆಲೆ ಇಳಿಕೆ ಮಾಡಲಾಗುವುದು, ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ 1.5 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮೊಬೈಲ್, ಚರ್ಮದ ಉತ್ಪನ್ನಗಳು, ಎಲ್ ಇಡಿ ಟಿವಿ, ಕ್ಯಾನ್ಸರ್ ಔಷಧಿಗಳ, ಎಲೆಕ್ಟ್ರಿಕ್ ಕಾರುಗಳ ಬೆಲೆಗಳನ್ನು ಇಳಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *