ಚಿನ್ನದ ಮೇಲೆ ಹೂಡಿಕೆ ಮಾಡಿಸಿ ಕೋಟ್ಯಾಂತರ ರೂ.ಗಳ ವಂಚಿಸಿದ್ದ ದಂಪತಿಗಳ ಬಂಧನ

ತುಮಕೂರು:ಚಿನ್ನದ ಆಸೆ ತೋರಿಸಿ ದುಪ್ಪಟ್ಟು ಹಣ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು ನಗರದ ಅಶೋಕ ರಸ್ತೆಯ ಆಕಾಶ್ ಜ್ಯೂಯಲರ್ಸ್ ಮಾಲೀಕ ಟಿ.ಶಿವಾನಂದಮೂರ್ತಿ ಅವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದರು. ಈ ಸಂಬಂಧ ನಗರ ಪೊಲೀಸ್ ಠಾನೆಯಲ್ಲಿ ವಂಚನೆಗೊಳಗಾದ 50ಕ್ಕೂ ಹೆಚ್ಚು ಜನ ದೂರು ದಾಖಲಿಸಿದ್ದರು.

ಆಕಾಶ್ ಜ್ಯುವೆಲರ್ಸ್ ಮಾಲೀಕ ಶಿವಾನಂದಮೂರ್ತಿ, ಪತ್ನಿ ಅನ್ನಪೂರ್ಣ ಅವರನ್ನು ನಗರ ಠಾಣೆ ಪೆÇಲೀಸರು ಬೆಂಗಳೂರಿನಲ್ಲಿ ಬಂಧಿಸಿ ನಗರಕ್ಕೆ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

‘ಹಣ ಹೂಡಿಕೆ ಅಥವಾ ಠೇವಣಿ ಇರಿಸಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆಯಾದಾಗ ಚಿನ್ನ ಖರೀದಿಸಿ ದರ ಹೆಚ್ಚಾದಾಗ ಮಾರಾಟ ಮಾಡಿ ಅಧಿಕ ಲಾಭ ನೀಡುವುದಾಗಿ ನಂಬಿಸಿದ್ದರು. ಹಣಕ್ಕೆ ಪ್ರತಿಯಾಗಿ ಅಕಾಶ್ ಜ್ಯುವೆಲಸ್ರ್ಗೆ ಸಂಬಂಧಿಸಿದ ಠೇವಣಿ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದ್ದರು. ಇದನ್ನು ನಂಬಿ ಜನ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ.

ಅಕಾಶ್ ಜ್ಯುವೆಲರ್ಸ್ ಮಾಲೀಕರ ವಿರುದ್ಧ ಜ.29ರಿಂದ ಫೆ.2ರ ವರೆಗೆ ನಗರ ಠಾಣೆಯಲ್ಲಿ 56 ದೂರು ಸಲ್ಲಿಕೆಯಾಗಿವೆ. ಮೊದಲ ದಿನ 50 ಕ್ಕೂ ಹೆಚ್ಚು ಜನ ಠಾಣೆಯ ಮೆಟ್ಟಿಲು ಹತ್ತಿದ್ದರು. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾನುವಾರವೂ ಹಲವರು ದೂರು ಸಲ್ಲಿಸಿದ್ದಾರೆ. ಸುಮಾರು 18 ಕೋಟಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.

‘ಅರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೆÇಲೀಸ್ ವಶಕ್ಕೆ ಪಡೆದು ತನಿಖೆ ನಡೆಸಲಾಗುವುದು. ಜನರಿಂದ ಪಡೆದ ಹಣ ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ಎಂಬುದನ್ನು ತನಿಖೆ ಮಾಡಿದ ತಂತರ ತಿಳಿಯಲಿದೆ.

Leave a Reply

Your email address will not be published. Required fields are marked *