ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಒಲೈಕೆ ಬಜೆಟ್- ಬಿಜೆಪಿಯಿಂದ ಪ್ರತಿಭಟನೆ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಸಲಿನ ಬಜೆಟ್ ಸಂಪೂರ್ಣರೈತ ವಿರೋಧಿ, ದಲಿತ ವಿರೋಧಿಜನ ವಿರೋಧಿ ಹಿಂದೂ ವಿರೋಧಿಯಾಗಿದೆ ಎಂದು ಆಪಾದಿಸಿ ಜಿಲ್ಲಾ ಬಿಜೆಪಿ ಮುಖಂಡರು ಸೋಮವಾರ ನಗರದಲ್ಲಿಸರ್ಕಾರದ ವಿರುದ್ಧಪ್ರತಿಭಟನೆ ನಡೆಸಿದರು.

ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆಟ್ರಾಕ್ಟರ್‍ರ್ಯಾಲಿ ನಡೆಸಿದ ಬಿಜೆಪಿ ಮುಖಂಡರುಜಿಲ್ಲಾಧಿಕಾರಿಕಚೇರಿ ಬಳಿ ಪ್ರತಿಭಟನೆ ನಡೆಸಿದರು.ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ಮತ ಬ್ಯಾಂಕ್‍ರಾಜಕಾರಣಕ್ಕೋಸ್ಕರ ಅಲ್ಪಸಂಖ್ಯಾತರನ್ನು ಓಲೈಸಿರುವ ಹಿಂದೂ ವಿರೋಧಿ ಎಂದು ತಮ್ಮನ್ನು ಸಾಬೀತು ಮಾಡಿಕೊಂಡಿದ್ದಾರೆ.ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಬಜೆಟ್‍ನಲ್ಲಿ ರೈತರು, ದಲಿತರು, ಜನ ಸಾಮಾನ್ಯರ ಹಿತವನ್ನು ಧಿಕ್ಕರಿಸಿ ವಂಚಿಸಿದ್ದಾರೆ ಎಂದು ಟೀಕಿಸಿದರು.

ಡಾ.ಬಿ.ಆರ್.ಅಂಬೇಡ್ಕರ್‍ಅವರಿಗೆ ಮೋಸ ಮಾಡಿ,ಅವರು ರಚಿಸಿದ ಸಂವಿಧಾನಕ್ಕೆ ಕಾಂಗ್ರೆಸ್‍ನವರು ಅಪಚಾರ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ದಲಿತರಿಗೆ ಯಾವುದೇ ವಿಶೇಷ ಸೌಲಭ್ಯ ಘೋಷಣೆ ಮಾಡದೆ ದಲಿತರ ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ.ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಾದ ಸರ್ಕಾರ ನಿರ್ಲಕ್ಷ್ಯ ಮಾಡಿದೆ.ದಲಿತರಿಗೆ ನೀಡಬೇಕಾದ ಆದ್ಯತೆ ನೀಡಲ್ಲ, ಹಿಂದೂ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ದೇವರಾಜ ಅರಸು ಅವರ ಮುಖವಾಡ ಹೊತ್ತು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಸು ಅವರ ಯಾವ ತತ್ವಗಳನ್ನೂ ಆಡಳಿತದಲ್ಲಿ ಅಳವಡಿಸಿಕೊಳ್ಳದೆ ಮುಸ್ಲೀಮರ ಓಲೈಕೆಯಲ್ಲಿ ತೊಡಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ದ್ರೋಹ. ಮತರಾಜಕಾರಣ ಮಾಡಿಕೊಂಡು ಬಂದಿರುವ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಇಂತಹ ಅನ್ಯಾಯ ಮಾಡುತ್ತಿರುವ ಸರ್ಕಾರವನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ ಎಂದರು.

ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎ.ಆಂಜನಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಈ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಸವಲತ್ತು ನೀಡಿದೆ, ಆದರೆ ಬಹುಸಂಖ್ಯೆಯ ದಲಿತ ವರ್ಗಕ್ಕೆ ಅನ್ಯಾಯ ಮಾಡಿದೆ.ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದಿಂದ ದಲಿತರಿಗೆ ಅನ್ಯಾಯವಾಗುತ್ತಲೇ ಇದೆ.ಎಸ್.ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ವಂಚಿಸಿದೆ ಎಂದು ಹೇಳಿದರು.

ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ ಮಾತನಾಡಿ, ತಾವು ಅಹಿಂದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಇದರಲ್ಲಿ ದಲಿತರು, ಹಿಂದುಳಿದವರನ್ನು ಕಡೆಗಣಿಸಿ ಅಲ್ಪಸಂಖ್ಯಾತರನ್ನೇ ಓಲೈಸುತ್ತಿದ್ದಾರೆ. ಅತಿ ಹೆಚ್ಚಿನ ಜನ ಸಂಖ್ಯೆ ಇರುವ ಹಿಂದುಳಿದ ವರ್ಗಗಳಿಗೆ ಬಜೆಟ್‍ನಲ್ಲಿ ನ್ಯಾಯ ಒದಗಿಸಿಲ್ಲ ಎಂದು ಟೀಕಿಸಿದರು.

ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, 1.3 ಲಕ್ಷಕೋಟಿ ಸಾಲ ಮಾಡಿರುವ ಸಿದ್ದರಾಮಯ್ಯ ಸರ್ಕಾರ ಮಂಡಿಸಿರುವ ಬಜೆಟ್ ಸಾಲದ ಬಜೆಟ್, ಈ ಮೂಲಕ ರಾಜ್ಯವನ್ನು ದಿವಾಳಿ ಅಂಚಿಗೆತಂದಿದ್ದಾರೆ. ಯಾವುದೇ ಹೊಸ ಯೋಜನೆಜಾರಿಗೆತರದೆ, ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿದೆ.ಮುಸಲ್ಮಾನರ 16 ಕಾಲೇಜುಗಳನ್ನು ಆರಂಭಿಸಲುಆಸಕ್ತಿ ವಹಿಸಿದೆ.ಹಿಂದೂಗಳ ಶವಸಂಸ್ಕಾರಕ್ಕೆ ಸ್ಮಶಾನಗಳಿಲ್ಲ, ಆದರೆ ಹಿಂದೂಗಳ ಜಮೀನು ನುಂಗುವ ವಕ್ಫ್, ಖಬರ್‍ಸ್ತಾನ್‍ಗಳಿಗೆ ನೆರವು ನೀಡುತ್ತಿದೆಎಂದುದೂರಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಂಗರಾಜು, ರೈತ ಮೋರ್ಚಾಜಿಲ್ಲಾಧ್ಯಕ್ಷ ಸಿದ್ಧರಾಮಣ್ಣ, ಮುಖಂಡರಾದ ಸಾಗರನಹಳ್ಳಿ ವಿಜಯಕುಮಾರ್, ಹೆಚ್.ಎಂ.ರವೀಶಯ್ಯ, ಧನುಷ್, ಟಿ.ಹೆಚ್.ಹನುಮಂತರಾಜು, ಸತ್ಯಮಂಗಲ ಜಗದೀಶ್, ಸಿ.ಎನ್.ರಮೇಶ್, ವಿಷ್ಣುವರ್ಧನ್, ಪುಟ್ಟರಾಜು, ಮಂಜುನಾಥ್, ಗಣೇಶ್‍ಪ್ರಸಾದ್, ಪ್ರೇಮಾ ಹೆಗಡೆ, ಲತಾಬಾಬು, ನಾಗರತ್ನಮ್ಮ, ಗಾಯತ್ರಿ, ವಸಂತ, ಶಿವಕುಮಾರ್, ವೆಂಕಟೇಶಾಚಾರ್, ರಾಜಶೇಖರ್, ಊರ್ಡಿಗೆರೆ ರವಿ, ನಿಸರ್ಗರಮೇಶ್, ಹನುಮಂತರಾಜು ಮೊದಲಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *