ತುಮಕೂರು: ನಗರದ ಸಮೀಪದ ಕ್ಯಾಸಂದ್ರ ಬಳಿಯಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಇಂಜಿನಿಯರಿಂಗ್ ಪ್ರಾಧ್ಯಾಪಕರುಗಳಿಗೆ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ತಂಡ ಪ್ರಥಮ ಸ್ಥಾನ ಗಳಿಸಿ, 5000 ನಗದು ಬಹುಮಾನ ಪಡೆದುಕೊಂಡಿದೆ.
ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮದಲ್ಲಿ ವಿಜಯಶಾಲಿಯಾದ ತಂಡಕ್ಕೆ ಜಿಲ್ಲಾ ಯುವಜನ ಸೇವಾ ಕ್ರೀಡ ಇಲಾಖೆಯ ನಿರ್ದೇಶಕರಾದ ರೋಹಿತ್ ಗಂಗಾಧರಯ್ಯ ಅವರು ಬಹುಮಾನ ಮತ್ತು ಟ್ರೋಪಿಯನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂಜೀವ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ರುದ್ರೇಶ್ ಕೆ ಸೇರಿದಂತೆ ಹಲವರು ಹಾಜರಿದ್ದರು. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ್, ಡೀನ್ ರೇಣುಕಾಲತಾ ಅವರು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.