ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 02-03ರಂದು ಟೆಕ್ನೋಡಿಯಾ-2025

ತುಮಕೂರು : ನಗರದ ಸಾಹೇ ವಿಶ್ವವಿದ್ಯಾನಿಲಯದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜೂನ್ 02 ಮತ್ತು 03 ರಂದು ಅಂತಾರಾಷ್ಟ್ರೀಯ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ “ಟೆಕ್ನೋಡಿಯಾ-2025” ಹಾಗೂ ಸ್ಪರ್ಧೆಯನ್ನು ಎಸ್.ಎಸ್.ಐ.ಟಿ ಕ್ಯಾಂಪಸ್‍ನಲ್ಲಿ ಬೆಳಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.

ಈ ಸ್ಪರ್ಧೆಯು ಎಂಜಿನಿಯರಿಂಗ್ ಪದವಿ (ಬಿ-ಟೆಕ್), ಸ್ನಾತಕೋತ್ತರ ಪದವಿ (ಎಂ-ಟೆಕ್) ಹಾಗೂ ಎಂಸಿಎ ವಿದ್ಯಾರ್ಥಿಗಳಿಗಾಗಿ 3 ವಿಭಾಗಗಳಲ್ಲಿ ನಡೆಯಲಿದೆ. ಬೇರೆ ಬೇರೆ ರಾಜ್ಯಗಳಿಂದ ಸುಮಾರು 500 ತಾಂತ್ರಿಕ ಪ್ರಾಜೆಕ್ಟ್ ಮಾದರಿಗಳೊಂದಿಗೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಹಿಸುತ್ತಿದ್ದಾರೆ. 2 ದಿನಗಳ ಈ ಕಾರ್ಯಕ್ರಮದಲ್ಲಿ ಪ್ರಾಜೆಕ್ಟ್ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿನ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ.

ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹ ಮಂತ್ರಿಗಳಾದ ಡಾ.ಜಿ.ಪರಮೇಶ್ವರರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಐಟಿಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ, ಬೆಂಗಳೂರಿನ ಸಿ-ಕ್ಯಾಂಪ್ ಸಿಇಒ ಮತ್ತು ನಿರ್ದೇಶಕರಾದ ಡಾ ತಸ್ಲಿವiರಿಫ್ ಸೈಯದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾಹೇ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಸಾಹೇ ರಿಜಿಸ್ಟ್ರಾರ್ ಡಾ. ಅಶೋಕ್ ಮೆಹ್ತಾ, ಸಾಹೇ ವಿವಿಯ ಪರೀಕ್ಷಾಂಗ ನಿಯಂತ್ರಕರು ಡಾ.ಜಿ.ಗುರುಶಂಕರ್, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ ವಿವೇಕ್ ವೀರಯ್ಯ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಎಸ್ ರವಿಪ್ರಕಾಶ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಟೆಕ್ನೋಡಿಯಾ ಸಂಯೋಜಕರಾದ ಸ್ಟೆಪ್ ಎಸ್‍ಎಸ್‍ಐಟಿ ನಿರ್ದೇಶಕರಾದ ಡಾ.ಮನು ಎಸ್ ಮತ್ತು ಸಹಾಯಕ ನಿರ್ದೇಶಕರಾದ ಗುರುನಂದನ್ ಪಿ.ಹೆಚ್, ಡೀನ್ ಎಲ್ಲಾ ವಿಭಾಗಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಜೂನ್ 03 ರಂದು ಟೆಕ್ನೋಡಿಯಾ ಸಮಾರೋಪ ಸಮಾರಂಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹ ಮಂತ್ರಿಗಳಾದ ಡಾ.ಜಿ.ಪರಮೇಶ್ವರರವರು ಭಾಗವಹಿಸಲಿದ್ದು, ಯುಕ್ಯಾಮ್ ಪ್ರೈವೇಟ್ ಲಿಮಿಟೆಡ್ ಸಿಇಒ ವರುಣ್ ದೇವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಎಸ್‍ಎಸ್‍ಐಟಿವತಿಯಿಂದ “ಓಪನ್ ಹೌಸ್” ಕಾರ್ಯಕ್ರಮ ಆಯೋಜಿಸಿದ್ದು, ವಿದ್ಯಾಲಯದ ಎಲ್ಲಾ ವಿಭಾಗಗಳಲ್ಲಿನ ಸೌಲಭ್ಯಗಳು, ಉಪಕರಣಗಳು, ಇತ್ಯಾದಿಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿದ್ದು, ತುಮಕೂರು ನಗರದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾಗರೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

Leave a Reply

Your email address will not be published. Required fields are marked *