ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗಗಳು ಜೂನ್ 26 ಹಾಗೂ 27ರಂದು ‘ಇಂಪ್ರೆಶನ್-2025’ ಎಂಬ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಹಮ್ಮಿಕೊಂಡಿವೆ. ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ಜೂನ್ 26ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನುಂ, ಕಾರ್ಯದರ್ಶಿ ಸಹನಾ ಎಂ., ಸಿಂಡಿಕೇಟ್ ಸದಸ್ಯ ಮನೋಜ್ ಹೆಚ್. ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವೆ ನಾಹಿದಾ ಜûಮ್ ಜóಮ್, ಪರೀಕ್ಷಾಂಗ ಕುಲಸಚಿವ ಡಾ. ಸತೀಶ್ ಗೌಡ ಎನ್., ಕಲಾ ಕಾಲೇಜಿನ ಪ್ರಾಂಶುಪಾಲೆ ಡಾ. ಜಿ. ದಾಕ್ಷಾಯಿಣಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸಿಬಂತಿ ಪದ್ಮನಾಭ ಕೆ.ವಿ. ಉಪಸ್ಥಿತರಿರುವರು.
ಕಳೆದ ಹತ್ತು ವರ್ಷಗಳಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಪತ್ರಿಕೋದ್ಯಮ ವಿಷಯದಲ್ಲಿ ಅತಿಹೆಚ್ಚು ಅಂಕ ಗಳಿಸಿ ಮಧುಗಿರಿ ಹಾಲಪ್ಪ ಫೌಂಡೇಶನ್ ಬಂಗಾರದ ಪಡೆದ ಹಿರಿಯ ವಿದ್ಯಾರ್ಥಿಗಳನ್ನು ಈ ಸಂದರ್ಭ ಸನ್ಮಾನಿಸಲಾಗುವುದು.
ಮಾಧ್ಯಮ ಹಬ್ಬದ ಅಂಗವಾಗಿ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ವರದಿಗಾರಿಕೆ, ಟಿವಿ ಸುದ್ದಿ ಪ್ರಸ್ತುತಿ, ರೇಡಿಯೋ ಜಾಕಿ, ಛಾಯಾಗ್ರಹಣ. ಪೋಸ್ಟರ್ ವಿನ್ಯಾಸ, ಪುಟ್ಟಕತೆ, ರೀಲ್ಸ್ ಮೇಕಿಂಗ್, ಪಿಟಿಸಿ, ಚರ್ಚೆ, ರಸಪ್ರಶ್ನೆ, ಜಾಹೀರಾತು ನಿರ್ಮಾಣ ಹಾಗೂ ಸಮೂಹ ನೃತ್ಯ ಸ್ಪರ್ಧೆಗಳು ನಡೆಯಲಿವೆ. ಕಲೆ, ವಾಣಿಜ್ಯ, ವಿಜ್ಞಾನ ಇತ್ಯಾದಿ ಎಲ್ಲ ವಿಭಾಗಗಳ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.
ಜೂನ್ 27ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಗುವುದು. ಅತಿಹೆಚ್ಚು ಅಂಕ ಗಳಿಸುವ ತಂಡ ಸಮಗ್ರ ಛಾಂಪಿಯನ್ಶಿಪ್ ಪಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಿಕೋದ್ಯಮಿ ಎಸ್. ನಾಗಣ್ಣ, ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಉದ್ಯಮಿಗಳಾದ ಡಾ. ಹೆಚ್. ಜಿ. ಚಂದ್ರಶೇಖರ್, ಡಾ. ಆರ್. ಎಲ್. ರಮೇಶ್ ಬಾಬು, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ, ಕುಲಸಚಿವೆ ನಾಹಿದಾ ಜûಮ್ ಜûಮ್ ಭಾಗವಹಿಸಲಿದ್ದಾರೆ. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಲಿದ್ದಾರೆ.