ತುಮಕೂರಿನ ಹಿರಿಯ ವಕೀಲ ಹಾಗೂ ಜಿಲ್ಲಾ ವಕೀಲರ ವಿವಿಧೋದ್ದೇಶ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ನವೀನ್ ನಾಯಕ್ ಮತ್ತು ಪ್ರತಿಮಾ ಅವರ ಪತ್ರಿ ನವ್ಯ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಬೆಂಗಳೂರು ಇನ್‍ಸ್ಟಿಟೂಪ್ ಆಫ್ ಟೆಕ್ನಾಲಜಿ ಕಾಲೇಜಿನ ಇನ್ಫಾರ್ಮೇಷನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಗಳಿಸಿದ್ದಾರೆ.

ಜು.4ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಕುಲಪತಿಗಳಿಂದ ನವ್ಯ ಅವರು ಪದವಿ ಸರ್ಟಿಫಿಕೇಟ್ ಪಡೆದರು. ನಿರಂತರ ಅಧ್ಯಯನ ಮತ್ತು ತಂದೆ ತಾಯಿಯ ಪ್ರೋತ್ಸಾಹದಿಂದ 3ನೇ ರ್ಯಾಂಕ್ ಪಡೆದಿದ್ದೇನೆ ಎಂದು ನವ್ಯ ತಿಳಿಸಿದ್ದಾರೆ.