ತುಮಕೂರು: ನಗರದ ಮಾರಿಯಮ್ಮನಗರದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ 3 ಜನರು ಶಾರ್ಟ್ ಸಕ್ರ್ಯೂಟ್ಗೆ ಸಿಲುಕಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ಧಿ ತಿಳಿದ ತಕ್ಷಣವೇ ಸ್ಥಳಕ್ಕೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಯಾವ ಕಾರಣದಿಂದ ಈ ದುರಂತ ನಡೆದಿದೆ ಎಂಬುದನ್ನ ಪತ್ತೆ ಹಚ್ಚಿ ಶೀಘ್ರವಾಗಿ ಸರಿಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತದನಂತರ ಗಾಯಾಳುಗಳನ್ನು ವಿಚಾರಿಸಲು ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು.