ತುಮಕೂರು : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಡಾ. ಹನುಮಂತನಾಥ ಮಹಾಸ್ವಾಮೀಜಿ, ಶಿವಯೋಗೀಶ್ವರ ಮಹಾಸ್ವಾಮೀಜಿ, ವೀರಪತ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ವೀರೇಶಾನಂದ ಸರಸ್ವತ ಸ್ವಾಮೀಜಿಗಳ ನೇತೃತ್ವದಲ್ಲಿ ತುಮಕೂರು ದಸರಾವನ್ನು ಉದ್ಘಾಟಿಸಲಾಯಿತು.

ಇದಕ್ಕೂ ಮುನ್ನ ದಸರಾ ಪ್ರಯುಕ್ತ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 22ರಂದು ಬೆಳಿಗ್ಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಧಾರ್ಮಿಕ ಉತ್ಸವ, ನವರಾತ್ರಿ ಉತ್ಸವ, ಧ್ವಜಾರೋಹಣ, ದುರ್ಗಾಪೂಜೆಯನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸೋಮಣ್ಣ, ಮಾಜಿ ಸಚಿವ ಕೆ.ಎನ್.ರಾಜಣ್ಣ, ಜನಪ್ರತಿನಿಧಿಗಳಾದ ಟಿ.ಬಿ. ಜಯಚಂದ್ರ, ಶಾಸಕ ಬಿ.ಸುರೇಶಗೌಡ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು, ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ., ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜಾ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.