ತುಮಕೂರು : ತುಮಕೂರು ನಗರದ 2ನೇ ಹಂತದ ಒಳಚರಂಡಿ ಯೋಜನೆಯಡಿ ಭೀಮಸಂದ್ರ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ 25 ಎಂ.ಎಲ್.ಡಿ ಸಾಮಥ್ರ್ಯದ (ಎಸ್.ಬಿ.ಆರ್) ತಂತ್ರಜ್ಞಾನ ಆಧಾರಿತ ಮಲಿನ ನೀರು ಸಂಸ್ಕರಣಾ ಘಟಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಘಟಕದ ಉದ್ಘಾಟನೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಅನಿಲ್ ಕುಮಾರ್ ಅವರಿಗೆ ಸೂಚನೆ ನೀಡಿದರು.
ಈ ಘಟಕದಲ್ಲಿ ತ್ಯಾಜ್ಯ ನೀರನ್ನು ಬ್ಯಾಚ್ಗಳಲ್ಲಿ ಸಂಸ್ಕರಿಸಿ, ಸಾವಯವ ವಸ್ತುಗಳು ಮತ್ತು ಪೆÇೀಷಕಾಂಶಗಳಂತಹ ಮಾಲಿನ್ಯಕಾರಕಗಳನ್ನು ಪರಿಣಾಮಕಾರಿಯಾಗಿ ತೆಗೆಯುವ ಪ್ರಕ್ರಿಯೆ ನಡೆಯುತ್ತದೆ. ಘಟಕವು ವಿಭಿನ್ನ ಹರಿವುಗಳು ಹಾಗೂ ಕಟ್ಟುನಿಟ್ಟಾದ ನಿರ್ಗಮ ಮಾನದಂಡಗಳಿಗೆ ಹೊಂದಿಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ. ಏಕ-ಟ್ಯಾಂಕ್ ವಿನ್ಯಾಸದ ಕಾರಣ ಸ್ಥಳೀಯ ಸಂಸ್ಥೆಗಳು ಹಾಗೂ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ನೀರಿನ ಸಂಸ್ಕರಣೆಗೆ ಈ ಘಟಕ ಸೂಕ್ತ ಪರಿಹಾರವಾಗಿದೆ ಎಂದರಲ್ಲದೆ, ಸಂಸ್ಕರಿಸಲ್ಪಟ್ಟ ನೀರನ್ನು ಕೈಗಾರಿಕಾ ಘಟಕಗಳು ಮರುಬಳಕೆ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಶುದ್ಧ ನೀರಿನ ಬಳಕೆಯ ಒತ್ತಡ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ. ಸೇರಿದಂತೆ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಗಂಗಸಂದ್ರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡ ಉದ್ಯಾನವನಕ್ಕೆ ಭೇಟಿ ನೀಡಿ, ಉದ್ಯಾನವನದಲ್ಲಿ ಕಲ್ಪಿಸಿರುವ ಮೂಲ ಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಿದರು.