ಮಧುಗಿರಿಗೆ ಶೀಘ್ರದಲ್ಲೇ ಸಾರಿಗೆ ಉಪ ವಿಭಾಗ ಕಚೇರಿ: ಸಚಿವ ರಾಮಲಿಂಗಾರೆಡ್ಡಿ

ತುಮಕೂರು : ಮಧುಗಿರಿಗೆ ಸಾರಿಗೆ ಉಪ ವಿಭಾಗ ಕಚೇರಿ ನೀಡಲು ಸದ್ಯದಲ್ಲಿ ಮಂಡಳಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು. ಅಲ್ಲದೆ ಶಾಸಕ ಕೆ.ಎನ್ ರಾಜಣ್ಣ ಅವರು ಪ್ರಸ್ತಾಪಿಸಿರುವ ಮಧುಗಿರಿ ತಾಲೂಕಿನ 21 ಗ್ರಾಮಗಳಿಗೆ ಬಸ್ ಸಂಚಾರಕ್ಕೆ ಕ್ರಮ ವಹಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸಾರಿಗೆ ಇಲಾಖೆ ಮತ್ತು ರೇμÉ್ಮ ಇಲಾಖೆ ಸಹಯೋಗದಲ್ಲಿ ಶನಿವಾರ ಮಧುಗಿರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರಿಗೆ ಅಧಿಕಾರಿಗಳ ಕಚೇರಿ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥ ಹಾಗೂ ರೇμÉ್ಮ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

 ದೇಶದಲ್ಲೇ ಅತಿಹೆಚ್ಚು ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ. ದೇಶದ ಯಾವ ರಾಜ್ಯದಲ್ಲೂ ಇಷ್ಟು ಪಥಗಳಿಲ್ಲ. ಪ್ರಧಾನಿ ನರೇಂದ್ರಮೋದಿ ಅವರ ತವರು ಜಿಲ್ಲೆ ಗುಜರಾತಿನಲ್ಲೂ ಇಷ್ಟು ಪಥಗಳನ್ನು ನಿರ್ಮಿಸಿಲ್ಲ ಎಂದು ಅವರು ತಿಳಿಸಿದರು.

ಸಾರಿಗೆ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ ಎಂದ ಅವರು, ಪ್ರಸ್ತುತ ರಾಜ್ಯದಲ್ಲಿ 45 ಚಾಲನಾ ಪಥಗಳನ್ನು ನಿರ್ಮಿಸಲಾಗಿದೆ. ಈ ಪೈಕಿ 7 ಪಥಗಳು ಈಗಾಗಲೇ ಪೂರ್ಣಗೊಂಡಿವೆ. 28 ಪಥಗಳು ಮುಗಿಯುವ ಹಂತದಲ್ಲಿವೆ ಹಾಗೂ ಇದೀಗ 10 ಪಥಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. 28 ಚಾಲನಾ ಪಥಗಳನ್ನು ಸದ್ಯದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ಉದ್ಘಾಟಿಸಲಿದ್ದಾರೆ ಎಂದರು.

ಅಲ್ಲದೆ 5800 ಬಸ್‍ಗಳನ್ನು ಈಗಾಗಲೆ ಖರೀದಿ ಮಾಡಲಾಗಿದ್ದು ಇನ್ನು ಹೊಸ 2000 ಬಸ್ ಗಳ ಖರೀದಿಗೆ ಕ್ರಮ ವಹಿಸಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಬಸ್‍ಗಳನ್ನು ಓಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕಳೆದ 9 ವರ್ಷಗಳಿಂದ ಇಲಾಖೆಯಲ್ಲಿ ನೇಮಕಾತಿ ಆಗಿರಲಿಲ್ಲ. ನಮ್ಮ ಸರ್ಕಾರ 9 ಸಾವಿರ ಹುದ್ದೆಗಳನ್ನು ಭರ್ತಿಮಾಡಿದೆ. ಈ ಪೈಕಿ 1000 ಹುದ್ದೆಗಳನ್ನು ಅನುಕಂಪದ ಆಧಾರದಲ್ಲಿ ನೀಡಲಾಗಿದ್ದು, ಇನ್ನು ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಅನುಮೋದನೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಅತಿಹೆಚ್ಚು ಸೌಲಭ್ಯಗಳನ್ನು ನೀಡಿದೆ ಎಂದರು.

ಅನ್ನಭಾಗ್ಯ ಮೂಲಕ ಹಸಿವುಮುಕ್ತ ಕರ್ನಾಟಕ ಯೋಜನೆಯಲ್ಲದೆ ಹಲವಾರು ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಅನುμÁ್ಠನಕ್ಕೆ ತರಲಾಗಿದೆ ಎಂದರು.

 ಮಧುಗಿರಿ ಸಂಪರ್ಕ ರಸ್ತೆಗಳ ವಿಸ್ತರಣೆಗೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದ ಅವರು ಜನರ ಬೇಡಿಕೆಗನುಸಾರ ರಾಜಧಾನಿ ಬೆಂಗಳೂರು, ತುಮಕೂರು ಕೈಗಾರಿಕಾ ಪ್ರದೇಶ ವಸಂತ ನರಸಾಪುರ ಹಾಗೂ ಕೊಡಿಗೇನಹಳ್ಳಿ ಮಾರ್ಗಕ್ಕೆ ಇಂದು ಹೊಸ ಬಸ್ ಸಂಚಾರ ಆರಂಭಿಸಲಾಗಿದೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಕಾಲದಲ್ಲಿಯೇ ಸಾರಿಗೆ ಘಟಕ, ಸಹಾಯಕ ಸಾರಿಗೆ ಕಚೇರಿ ಆರಂಭಿಸಿ ಇದೀಗ ಕಚೇರಿ ಕಟ್ಟಡಕ್ಕೂ ಶಂಕುಸ್ಥಾಪನೆ ನೆರವೇರಿದ್ದು ಇವರೇ ಉದ್ಘಾಟಿಸುವಂತಾಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ಮಧುಗಿರಿ ಜಿಲ್ಲೆಯಾಗುವ ಎಲ್ಲ ಸಾಧ್ಯತೆಗಳಿರುವುದರಿಂದ ಪೂರಕ ಸೌಲಭ್ಯಗಳು ಆಗಬೇಕಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾμÁ, ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಅಪರ ಸಾರಿಗೆ ಆಯುಕ್ತೆ ಎಂ.ಪಿ.ಓಂಕಾರೇಶ್ವರಿ, ರೇμÉ್ಮ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ, ಜಂಟಿ ಸಾರಿಗೆ ಆಯುಕ್ತೆ ಎನ್.ಜಿ. ಗಾಯತ್ರಿದೇವಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎ.ವಿ.ಪ್ರಸಾದ್, ಸಹಾಯಕ ಸಾರಿಗೆ ಅಧಿಕಾರಿ ವೀರಣ್ಣ, ಉಪ ಪೆÇಲೀಸ್ ಅಧೀಕ್ಷಕ ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *