ತುಮಕೂರು: ಪ್ರಖ್ಯಾತ ಪರಿಗಣಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಐಯರ್ ಎಜುಕೇಷನ್(ಸಾಹೇ) ವಿಶ್ವ ವಿದ್ಯಾನಿಲಯದ 14ನೇ ಘಟಿಕೋತ್ಸವ ಇದೇ ಶನಿವಾರ ನವೆಂಬರ್ 22ರಂದು ಹೆಚ್. ಎಂ. ಗಂಗಾಧರಯ್ಯ ಸ್ವಾರಕ ಭವನದ ಆವರಣದಲ್ಲಿ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಭರದಿಂದ ನಡೆಸಲಾಗಿದೆ.
ಬೃಹದಾಕಾರವಾದ ವಿಶಾಲ ವೇದಿಕೆ ನಿರ್ಮಾಣಗೊಂಡಿದ್ದು ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡಿದೆ. ಸುಮಾರು 5 ಸಾವಿರ ಪ್ರೇಕ್ಷಕರಿಗೆ ಆಸನವ್ಯವಸ್ಥೆಯನ್ನು ಮಾಡಲಾಗಿದೆ. ಜೊತೆಗೆ. ವೇದಿಕೆಯ ಮುಂಭಾಗ ಗಣ್ಯರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ವಿಶೇಷ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಭಾಗವಾರು ಕೂರಲು ವ್ಯವಸ್ಥೆಯನ್ನು ಮಾಡಲಾಗಿದೆ.

ಊಟದ ವ್ಯಸವಸ್ಥೆ : ಘಟಿಕೋತ್ಸವಕ್ಕೆ ಆಗಮಿಸುವಂತಹ 5 ಸಾವಿರಕ್ಕೂ ಅಧಿಕ ಮಂದಿಗೆ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಹಲವು ಕೌಂಟರ್ಗಳಲ್ಲಿ ಮಾಡಲಾಗಿದೆ.
ಭದ್ರತೆ: ಘಟಿಕೋತ್ಸವ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಬರುವ ನಿರೀಕ್ಷೆಯಿರುವುದರಿಂದ ಜನಸಂದಣಿಯನ್ನು ನಿಯಂತ್ರಿಸಲು ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಎಲ್ಲೂ ವ್ಯವಸ್ಥೆ ಹಾಳಾಗದಂತೆ ನಿಗಾವಹಿಸಲಾಗಿದೆ.
ಸಂಚಾರ: ಘಟಿಕೋತ್ಸವಕ್ಕೆ ಬರುವ ವಾಹನಗಳಿಗೆ ಎಲ್ಲೂ ಸಂಚಾರ ದಟ್ಟಣೆಯಾಗದಂತೆ ಪ್ರತ್ಯೇಕ ಸಂಚಾರಿ ಮಾರ್ಗಗಳನ್ನು ಮಾಡಲಾಗಿರುವುದರ ಜೊತೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ಕಾರ್ಯಕ್ರಮ: ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ನವೆಂಬರ್ 22ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವ ಆಯೋಜಿಸಲಾಗಿದೆ.
ಸಾಹೇ ಘಟಿಕೋತ್ಸವದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀ ಸ್ವಾಮಿ ಜಪಾನಂದ ಜಿ ಮಹಾರಾಜ್ ಹಾಗೂ ವಿಜ್ಞಾನಿ/ಭಾರತೀಯ ವಿಜ್ಞಾನಿ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್ನ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಕೆ.ಪಿ.ಜೆ.ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಜಯರಾಮ್ ರಮೇಶ್ ಅವರು ಘಟಿಕೋತ್ಸವ ಭಾಷಣ ನಡೆಸಿಕೊಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವರಾದ ಡಾ. ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್ ಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಡಾ ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದಾರೆ.