ತುಮಕೂರು : ಪ್ರತಿಪದ ಪ್ರಕಾಶನದ ವತಿಯಿಂದ ಜನಪರ ಚಿಂತಕ ಕೆ.ದೊರೈರಾಜ್ ಅವರ ‘ನಮ್ಮ ಹಟ್ಟಿ’ ಒಂದು ಹಟ್ಟಿಯ ಆತ್ಮಕಥಾನಕ ಕೃತಿ ಬಿಡುಗಡೆ ಸಮಾರಂಭ ಡಿ.20ರಂದು ಬೆಳಗ್ಗೆ 10.30 ಗಂಟೆಗೆ ತುಮಕೂರಿನ ಅಮಾನಿಕೆರೆ ಸಮೀಪವಿರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಥೆಗಾರ ಮತ್ತು ವಿಮರ್ಶಕ ಡಾ.ಜಿ.ವಿ.ಆನಂದಮೂರ್ತಿ ಒಂದು ಹಟ್ಟಿಯ ಆತ್ಮಕಥಾನಕವನ್ನು ನಿರೂಪಣೆ ಮಾಡಿದ್ದಾರೆ.

ಚಿಕ್ಕಮಗಳೂರಿನ ಹಿರಿಯ ಹೋರಾಟಗಾರ ಹಾಗೂ ಚಿಂತಕ ಎಚ್.ಎಂ.ರುದ್ರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೃತಿ ಕುರಿತು ಡಾ.ಎಸ್. ನಟರಾಜ ಬೂದಾಳ್ ಮಾತನಾಡುವರು.
ವೇದಿಕೆಯಲ್ಲಿ ಚಿಂತಕ ಕೆ.ದೊರೈರಾಜ್, ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಸ್.ಮೂರ್ತಿ, ಲೇಖಕಿ ಬಾ.ಹ.ರಮಾಕುಮಾರಿ, ಹಿರಿಯ ಹೋರಾಟಗಾರ ಸಯ್ಯೀದ್ ಮುಜೀಬ್, ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೈ.ಕೆ.ಬಾಲಕೃಷ್ಣಪ್ಪ, ಲೇಖಕ ಡಾ.ಜಿ.ವಿ.ಆನಂದಮೂರ್ತಿ ಇರಲಿದ್ದಾರೆ