ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ಅಧಿಕಾರ ಸ್ವೀಕಾರ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ಅವರು ವರ್ಗಾವಣೆಗೊಂಡ ಜಿಲ್ಲಾಧಿಕಾರಿ ರವೀಂದ್ರ.ಪಿ.ಎನ್.ಅವರಿಂದ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರವು 2025ರ ಕೊನೆಯ ದಿನದಂದು ಹಲವಾರು ಐಎಎಸ್ ಅಧಿಕಾರಿಗಳನ್ನು ದಿಢೀರನೇ ವರ್ಗಾವಣೆ ಮಾಡಿತ್ತು, ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಜಿ.ಪ್ರಭು ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದ ಹಿನ್ನಲೆಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.

ಜಿ.ಪ್ರಭು ಅವರು ತುಮಕೂರು ಜಿಲ್ಲಾ ಪಂಚಾಯತಿ ಸಿಇಓ ಆಗಿ 2023 ಜೂನ್ ನಿಂದ 2025ರ ಡಿಸೆಂಬರ್ 31ರವರೆಗೆ ಕಾರ್ಯನಿರ್ವಹಿಸಿದರು.

ಚಿಕ್ಕಬಳಾಪುರ ಜಿಲ್ಲಾಧಿಕಾರಿಯಾಗಿದ್ದ ರವೀಂದ್ರ.ಪಿ.ಎನ್.ಅವರನ್ನು ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ರವೀಂದ್ರ.ಪಿ.ಎನ್. ಅವರು ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುವುದರ ಮೂಲಕ ಜನಾನುರಾಗಿಗಳಾಗಿದ್ದರು. 2023 ಜೂನ್ ನಿಂದ ಇದುವರೆವಿಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಗಿ ರವೀಂದ್ರ.ಪಿ.ಎನ್.ಅವರು ಕಾರ್ಯನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *