ತುರುವೇಕೆರೆ: ಜೆಡಿಎಸ್-ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ


ತುರುವೇಕೆರೆ:ದಬ್ಬೇಘಟ್ಟ ಹೋಬಳಿ ಅರೇಮಲ್ಲೇನಹಳ್ಳಿ ಹಾಗೂ ಕಣತೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ವ್ಯಾಪ್ತಿಯಲ್ಲಿ ಹಲವಾರು ಮುಖಂಡರು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬೆಎಂಎಲ್ ಕಾಂತರಾಜು ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಸಂಘಟನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಮುದ್ದನಹಳ್ಳಿ ಗ್ರಾಮಸ್ಥರುಗಳಾದ ಎಸ್ ರಂಗಪ್ಪನವರು, ಪುರುಷೋತ್ತಮ ನವೀನ್ ಬ್ಯಾಟರಂಗಪ್ಪ, ಗುಡೇಗೌಡ ಹಾಗೂ ಮುಂತಾದವರು ಜೆಡಿಎಸ್ ಪಕ್ಷವನ್ನು ತೊರೆದು ಮತ್ತು ದಬ್ಬೇಘಟ್ಟ ಗ್ರಾಮದ ರಂಗಪ್ಪನವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು.

ಅವರನ್ನು ಅತ್ಯಂತ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಕೊಂಡ ಕಾಂತರಾಜು ಅವರು, ಪಕ್ಷ ಸಂಘಟನಾ ಕಾರ್ಯಕ್ರಮವನ್ನು ಮುಂದುವರೆಸಿ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಬೇವಿನಹಳ್ಳಿ ಹಾಗೂ ಹುಲಿಕಲ್, ಸೊಪ್ಪನಹಳ್ಳಿ, ಬ್ರಹ್ಮದೇವರಹಳ್ಳಿ, ಅರೇಮಲ್ಲೇನಹಳ್ಳಿ, ಅರೇಮಲ್ಲೇನಹಳ್ಳಿ ಗೊಲ್ಲರಹಟ್ಟಿ, ಹಳ್ಳದ ಹೊಸಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು, ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಪಕ್ಷ ಸಂಘಟಿಸುವಂತೆ ಬೆಎಂಎಲ್ ಕಾಂತರಾಜು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಎಲ್ಲಾ ವಿಭಾಗಗಳ ಪದಾಧಿಕಾರಿಗಳು ಹಾಗೂ ಪಕ್ಷದ ನಾಯಕರುಗಳು, ಮುಖಂಡರುಗಳು ಭಾಗಿಯಾಗವಹಿಸಿದ್ದರು.

Leave a Reply

Your email address will not be published. Required fields are marked *