ಫೆ15- ಕೊರಟಗೆರೆಯಲ್ಲಿ ಉದ್ಯೋಗ ಮೇಳ : ಅವಕಾಶ ಬಳಸಿಕೊಳ್ಳಿ ಡಾ. ಜಿ.ಪರಮೇಶ್ವರ್

ತುಮಕೂರು: ವಿದ್ಯಾವಂತ ಯುವಕ-ಯುವತಿಯರ ಉತ್ತಮ ಭವಿಷ್ಯಕ್ಕಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಡಾ.ಜಿ. ಪರಮೇಶ್ವರ ಫೌಂಡೇಶನ್, ಹಾಲಪ್ಪ ಪ್ರತಿಷ್ಠಾನ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಉದ್ಯೋಗ ಮೇಳ ಹಾಗೂ ಕೌಶಲ್ಯ ತರಬೇತಿ ಮೇಳವನ್ನು ಕೊರಟಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 15ರ ಬುಧವಾರದಂದು ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.

ಕೆಲಸ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದ್ದು, ನೇರ ಸಂದರ್ಶನದ ಪ್ರಯೋಜನ ಪಡೆಯಬಹುದಾಗಿದೆ ಎಂದು ಕೊರಟಗೆರೆ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. 60ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ (Job Mela) ಭಾಗವಹಿಸುತ್ತಿದ್ದು, ಕೊರಟಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ವೇದಿಕೆ ನಿರ್ಮಾಣ ಮತ್ತು ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಲಾಗಿದೆ. ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ತಿಪ್ಪೆಸ್ವಾಮಿ, ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸನ್ನ್‍ಕುಮಾರ್, ಎಸ್‍ಎಸ್‍ಐಟಿ ಪ್ಲೇಸ್‍ಮೆಂಟ್ ಆಫೀಸರ್ ಅಶೋಕ್ ಮೆಹ್ತಾ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಉಪನ್ಯಾಸಕರಾದ ಗಿರಿಧರ್ ಮತ್ತಿತರು ಸೋಮವಾರ ಸಂಜೆ ಭೇಟಿ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

Registration Counter in Udyogamela

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಡಾ.ಜಿ. ಪರಮೇಶ್ವರ ಫೌಂಡೇಷನ್, ಹಾಲಪ್ಪ ಪ್ರತಿಷ್ಠಾನ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉದ್ಯೋಗ ಮೇಳವನ್ನು ಆಯೋಜಿಸಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9ಕ್ಕೆ ನೋಂದಣಿ ಆರಂಭಗೊಳ್ಳಲಿದ್ದು, ಸಂಜೆ 4 ರ ತನಕ ಜಾಬ್ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ, ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹಲವು ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಪ್ರತಿ, ಪಾಸ್ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರ ತರಬೇಕು. ಇಷ್ಟು ದಾಖಲೆಗಳ ಸಮೇತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು ಎಂದು ಡಾ.ಜಿ. ಪರಮೇಶ್ವರ ಫೌಂಡೇಶನ್ ಮತ್ತು ಹಾಲಪ್ಪ ಪ್ರತಿμÁ್ಠನದ ಅಧ್ಯಕ್ಷರಾದ ಮುರುಳಿಧರ್ ಹಾಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.

Leave a Reply

Your email address will not be published. Required fields are marked *