ತ್ವರಿತಗತಿಯಲ್ಲಿ ತುಮಕೂರು ಗ್ರೇಟರ್ ಬೆಂಗಳೂರು ಆಗಲಿದೆ- ಡಾ.ಜಿ.ಪರಮೇಶ್ವರ್

ಬೆಂಗಳೂರು ನಗರ ದಂತೆ ತ್ವರಿತಗತಿಯಲ್ಲಿ ಅಭಿವೃದ್ಧಿ ಪಥದಲ್ಲಿರುವ ತುಮಕೂರು ಗ್ರೇಟರ್ ಬೆಂಗಳೂರು ಆಗಲಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ಸೆಪ್ಟೆಂಬರ್ 16 ಶನಿವಾರ ಸಂಜೆ ಅರ್ಬನ್ ರೆಸಾರ್ಟ್ ನಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯ ಪ್ರಮುಖ ಕೈಗಾರಿಕೆಗಳ ಸಿ.ಇ.ಒ ಗಳು ಹಾಗೂ ಹೂಡಿಕೆದಾರರ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಯಶಸ್ವಿ ಉದ್ಯಮಿಗಳಿಗೆ ಶಾಲು ಹೊದಿಸಿ, ಸ್ಮರಣ ಸಂಚಿಜೆ ನೀಡಿ ಪ್ರಶಸ್ತಿ ಪ್ರದಾನ ಮಾಡಿದರು.

ಹಲವು ಸವಾಲುಗಳನ್ನು ಎದುರಿಸಿ ಉದ್ಯಮ ರಂಗದಲ್ಲಿ ಸಾಧನೆ ಮಾಡಿ ಆರ್ಥಿಕ ಬೆಳವಣಿಗೆ ತಮ್ಮದೇ ಸೇವೆ ಸಲ್ಲಿಸುತ್ತಿರುವನ್ನು ಸನ್ಮಾನ ಮಾಡಿ ಪ್ರಶಸ್ತಿ ನೀಡುವುದು ಗೌರವದ ವಿಷಯವಾಗಿದೆ, ಎಲ್ಲ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಜಿಲ್ಲೆಯು ಹೂಡಿಕೆದಾರರ ಆಕರ್ಷಣೆ ಕೇಂದ್ರವಾಗಿ ಹೊರಹೊಮ್ಮಬೇಕು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗಾರಿಕಾ ವಲಯವನ್ನು ಸಮಗ್ರವಾಗಿ ಬೆಳೆಸಲು ಗಂಭೀರ ಪ್ರಯತ್ನ ನಡೆದಿದೆ ಎಂದರು.

ಸಾಫ್ಟವೇರ್ ಉದ್ಯಮದಲ್ಲಿ ರಾಜ್ಯದ ಪಾಲು ಶೇಕಡಾ 60ರಷ್ಟು ಇದ್ದು ಹಾರ್ಡ್ ವೇರ್ ನಲ್ಲಿ ಅಭಿವೃದ್ಧಿ ಹೊಂದಬೇಕು,ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬೆಳವಣಿಗೆಗೆ ಅವಕಾಶ ಇದೆ, ಸ್ಟಾರ್ಟ ಅಪ್ ಬೆಳೆಯಬೇಕು. ಚಂದ್ರಯಾನ ದಲ್ಲಿ ಸ್ಥಳೀಯ ಕೈಗಾರಿಕಾ ಕೊಡುಗೆ ಇದೆ, ಮೆಟ್ರೋ ತುಮಕೂರು ಜಿಲ್ಲೆಯ ವರೆಗೂ ಪರಿಶೀಲನೆ ಹಂತದಲ್ಲಿದೆ, ನಮ್ಮ ಎಸ್ ಐಟಿ ಸಂಸ್ಥೆಯಿಂದ 50000 ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ ನೀಡಿದೆ,ಪಾವಗಡ ಪ್ರಪಂಚದ 3ನೇ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಉತ್ಪಾದನೆ ಮಾಡುವ ಕೇಂದ್ರ ವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಂಟರ್ ಟೈನ್ ಮೆಂಟ್, ಇನ್ನೋವೇಶನ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ಇವೆ, ಉದ್ಯಮ ರಂಗ ಹೊಸ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆ ನೀಡುವುದು ಈ ಪ್ರಶಸ್ತಿಯ ಮೂಲ ಉದ್ದೇಶವಾಗಿದ್ದು, ಇದೀಗ ಜಿಲ್ಲೆಯಲ್ಲಿ ನಡೆದಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಹೆಚ್ಚು ಮಂದಿ ಅತ
ಪಾಲ್ಗೊಂಡಿದ್ದು, ಎಲ್ಲಾ ಕೈಗಾರಿಕೋದ್ಯಮಿಗಳು ಜಿಲ್ಲೆಯಲ್ಲಿ ಹೂಡಿಕೆ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಶ್ರೀನಿವಾಸ ಕೆ ಮಾತಾನಾಡಿ ರಸ್ತೆ, ರೈಲ್ವೇ ಮಾರ್ಗ, ನೀರು ಪೂರೈಕೆ, ವ್ಯವಸ್ಥೆ ಸುಗಮವಾಗಿದೆ, ಕೈಗಾರಿಕೆಗಳಿಗೆ ಅಗತ್ಯವಾದ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು. ಹಾಗೂ ಜಿಲ್ಲೆಯಲ್ಲಿ ಉದ್ಯಮ ಬೆಳವಣಿಗೆಗೆ ಇರುವ ಅವಕಾಶವನ್ನು ಪ್ರಸ್ತುತ ಪಡಿಸಿದರು.

ರಾಜ್ಯ ಎಫ್.ಕೆ.ಸಿ.ಸಿ ನಿರ್ದೇಶಕರಾದ ಸುಜ್ಞಾನ್ ಹೀರೆಮಠ ಸರ್ವರನ್ನು ಸ್ವಾಗತಿಸಿ ಮಾತನಾಡುತ್ತಾ ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದ್ದು ಅವಕಾಶವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ ಪ್ರಭು. ಮಾತನಾಡಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತರಾದ ಆಶ್ವೀಜ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು, ಉಪ ನಿರ್ದೇಶಕ ನಾಗರಾಜು ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *