ತುಮಕೂರು: ಜೆಡಿಎಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿಯವರನ್ನು ಉಚ್ಛಾಟಿಸಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸ್ಪಷ್ಟ ಪಡಿಸಿದ್ದಾರೆ.
ಈ ಸಂಬಂಧ ಪತ್ರಕರ್ತರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ ಜೆಡಿಎಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಪಕ್ಷವು ಯಾವ ತೀರ್ಮಾನ ವನ್ನು ತೆಗೆದುಕೊಂಡಿಲ್ಲ, ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯದಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.