ಲೋಕಸಭಾ ಚುನಾವಣೆಗೂ ಮುನ್ನ ಒಳಮೀಸಲಾತಿ ಜಾರಿಯಾಗಲಿದೆ- ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ತುಮಕೂರು- ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಒಳಮೀಸಲಾತಿ ಜಾರಿಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರದ ಕೆಲಸ ಏನೂ ಇರುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹೆಚ್ಚಳ ಮಾಡಿತ್ತು. ಅದು ಜಾರಿಯಾಗುತ್ತದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ಟ್, ಸೆಕ್ಷನ್‍ಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಈಗ ಯಾವ ತೀರ್ಮಾನ ಕೈಗೊಂಡಿದ್ದಾರೆ ಎಂದು ಟೀಕಿಸಿದರು.

ಫೆಬ್ರವರಿಯಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ. ಅದು ಒಳಮೀಸಲಾತಿ ಹೋರಾಟಗಾರರಿಗೆ ಮೊದಲನೇ ಗೆಲುವಾಗಲಿದೆ ಎಂದು ಅವರು ಹೇಳಿದರು. ಅಟಾರ್ನಿ ಜನರಲ್ ಅವರೇ ಒಳ ಮೀಸಲಾತಿ ಪರವಾಗಿ ಇದ್ದಾರೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸಹ ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ಇಡೀ ದೇಶದಲ್ಲಿ ಒಳ ಮೀಸಲಾತಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ತೀರ್ಮಾನ ಕೈಗೊಂಡಿರುವುದನ್ನು ಖಂಡಿಸಿರುವ ರಾಜ್ಯದ ಜನತೆಯ ಮುಂದೆ ಕಾಂಗ್ರೆಸ್ ಸರ್ಕಾರ ಬೆತ್ತಲಾಗಿದೆ ಎಂದು ಹರಿಹಾಯ್ದ ಸಚಿವರು,ರಾಜ್ಯ ಕಾಂಗ್ರೆಸ್ ಸರ್ಕಾರದ ಈ ತೀರ್ಮಾನ ನ್ಯಾಯಾಲಯಕ್ಕೆ ಸವಾಲು ಹಾಕಿದ ರೀತಿಯಲ್ಲಿದೆ. ಇದು ಸಿಬಿಐಗೆ ಸವಾಲು ಅಲ್ಲ, ನ್ಯಾಯಾಲಯಕ್ಕೆ ಸವಾಲು ಎಂದರು.

ಅಂದು ಸಿಬಿಐನವರು ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ವಿರುದ್ಧದ ತನಿಖೆಗೆ ಅನುಮತಿ ಕೇಳಿದ್ದರು. ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಇದಾದ ಬಳಿಕ ಡಿ.ಕೆ. ಶಿವಕುಮಾರ್ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪು ಬರಲಿ. ನ್ಯಾಯಾಲಯದ ಮುಂದೆಯೇ ಕ್ಲೀನ್‍ಚೀಟ್ ಪಡೆದು ಜನರ ಮುಂದೆ ಹೋಗಬೇಕಿತ್ತು ಎಂದರು.

ಇಂತಹ ಪ್ರಕರಣಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರುವುದಿಲ್ಲ. ಈ ಸರ್ಕಾರದ ನಿಲುವನ್ನು ನಾನು ಖಂಡಿಸುತ್ತೇನೆ ಎಂದ ಅವರು, ಒಂದು ಬಾರಿ ಎಫ್‍ಐಆರ್ ಆದ ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು. ಒಂದು ಸಲ ಪ್ರಕರಣಗಳು ನ್ಯಾಯಾಲಯಕ್ಕೆ ಹೋದರೆ ಅದರ ಬಗ್ಗೆ ನ್ಯಾಯಾಧೀಶರೇ ತೀರ್ಮಾನ ಕೈಗೊಳ್ಳಬೇಕು. ಸಂಪುಟಕ್ಕೆ ಯಾವುದೇ ಅಧಿಕಾರ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ದ ಅನೇಕ ಪ್ರಕರಣಗಳಿವೆ. ಹಾಗಾಗಿ ಇದನ್ನು ನ್ಯಾಯಾಲಯದಲ್ಲೇ ವಜಾ ಮಾಡಬಹುದಿತ್ತು. ಆದರೆ ಸಂಪುಟದ ಈ ತೀರ್ಮಾನ ರಾಜ್ಯ ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟಂತಾಗಿದೆ ಎಂದು ಅವರು ಹೇಳಿದರು.
ಚುನಾವಣೆಗೂ ಮುನ್ನ ಒಳ ಮೀಸಲಾತಿ

ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡುವ ಉದ್ಯೋಗದಲ್ಲಿ ಮೀಸಲಾತಿ ಘೋಷಣೆ ಮಾಡಬೇಕಿದೆ. ಒಳ ಮೀಸಲಾತಿಯಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಿದ್ದೇವೆ. ಅರುಣ್ ಮಿಶ್ರ ತೀರ್ಪನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ವಿಸ್ತೃತ ಪೀಠಕ್ಕೆ ವರ್ಗಾವಣೆ ಸಹ ಆಗಿದೆ. ಹಾಗಾಗಿ ಅರುಣ್ ಮಿಶ್ರಾ ಶಿಫಾರಸ್ಸಿನ ಬಗ್ಗೆ ಸುಪ್ರೀಂ ಕೋರ್ಟ್‍ನಲ್ಲಿ ಚರ್ಚೆ ಆಗುತ್ತದೆ ಎಂದರು.

ಫೆಬ್ರವರಿಯಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ. ಅದು ಒಳಮೀಸಲಾತಿ ಹೋರಾಟಗಾರರಿಗೆ ಮೊದಲನೇ ಗೆಲುವಾಗಲಿದೆ ಎಂದು ಅವರು ಹೇಳಿದರು.
ಅಟಾರ್ನಿ ಜನರಲ್ ಅವರೇ ಒಳ ಮೀಸಲಾತಿ ಪರವಾಗಿ ಇದ್ದಾರೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸಹ ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ಇಡೀ ದೇಶದಲ್ಲಿ ಒಳ ಮೀಸಲಾತಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.

ಜಾತಿ ಗಣತಿ ಅವಶ್ಯಕತೆ ಇದೆ. ಹಾಗೆಯೇ ಅಂದು ಇದರೊಂದಿಗೆ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಸಹ ಮಾಡಲಾಗಿತ್ತು. ಎಲ್ಲದರ ಬಗ್ಗೆಯೂ ವೈಜ್ಞಾನಿಕವಾಗಿ ವರದಿ ಬಹಿರಂಗಪಡಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಬದ್ಧತೆ ಇರಬೇಕು. ಪದೇ ಪದೇ ಮಾಧ್ಯಮಗಳಲ್ಲಿ ನಾನು ಮಾಡುತ್ತೀನಿ ಎಂದು ಹೇಳುವುದು ಶೋಭೆ ತರಲ್ಲ ಎಂದರು.

Leave a Reply

Your email address will not be published. Required fields are marked *