
ಶಿಕ್ಷಕರ ನಡುವೆ ಸಮಾನತೆ ನಿರ್ಮಿಸಬೇಕಿರುವುದು ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ ಶಿಕ್ಷಕರ ನಡುವೆ ತಾರತಮ್ಯ ಮಾಡುವುದು ಸರಿಯಲ್ಲ ಎಂದು ರೂಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಕಳಳ ವ್ಯಕ್ತಪಡಿಸಿದರು.
ತುಮಕೂರು ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾತನಾಡಿ
ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರೆಲ್ಲರೂ ಒಂದೇ ಹಾಗೆಯೇ ಶಿಕ್ಷಣ ಪಡೆಯುತ್ತಿರುವ ಮಕ್ಕಳೂ ಒಂದೇ. ವೇತನ ಸ್ಥಾನಮಾನ ಹಾಗೂ ಇತರೇ ಸೌಲಭ್ಯಗಳನ್ನು ಶಿಕ್ಷಕರಿಗೆ ಸರ್ಕಾರ ನೀಡುವಲ್ಲಿ ತಾರತಮ್ಯ ಮಾಡಬಾರದು. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜೊತೆಗೆ ದೇಶದ ಭವಿಷ್ಯವನ್ನೂ ನಿರ್ಮಾಣ ಮಾಡುವ ಅಮೂಲ್ಯ ಸಂಪನ್ಮೂಲವಾಗಿದ್ದಾರೆ. ಈ ಹಿನ್ಮೆಲೆಯಲ್ಲಿ ಸರ್ಕಾರ ಶಾಲೆಗಳು ಯಾವುದೇ ಇರಲಿ ಶಿಕ್ಷಕರಿಗೆ ಸಮಾನ ವೇತನ ಹಾಗೂ ಸೌಲಭ್ಯಗಳನ್ನು ನೀಡಬೇಕೆಂದು ಅಭಿಪ್ರಾಯಪಟ್ಟರು.