ಡಿ.30 ರಂದು “ತುಮಕೂರು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ”

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಡಿಸೆಂಬರ್ 30ರಂದು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ “ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ಕಾರ್ಯಾಗಾರ-2023 ವನ್ನು ಆಯೋಜಿಸಲಾಗಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಎ. ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ಅವರು ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಸ್ತುಪ್ರದರ್ಶನವನ್ನು ಉದ್ಘಾಟಿಸುವರು.  ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸಿರಿಧಾನ್ಯಗಳ ರಾಶಿ ಉದ್ಘಾಟಿಸುವರು.  ನವದೆಹಲಿ ವಿಶೇಷ ಪ್ರತಿನಿದಿ ಟಿ.ಬಿ. ಜಯಚಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸುವರು.  ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಅಧ್ಯಕ್ಷತೆ ವಹಿಸುವರು. 

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕೃಷಿಕ ಸಮಾಜದ ಪದಾಧಿಕಾರಿಗಳು ಹಾಗೂ ರೈತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕ ಡಾ: ಎನ್.ರಮೇಶ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *