ತುಮಕೂರು: ಉತ್ತಮ ಸಮಾಜ ಕಟ್ಟಲು ಸಮಾಜ ಕಾರ್ಯ ವಿದ್ಯಾರ್ಥಿಗಳು ಮುಂದಾಗಬೇಕು. ಸಮಾಜದ ಕಠಿಣ ಸವಾಲುಗಳನ್ನು ಎದುರಿಸುವ ಸಾಮಥ್ರ್ಯ ಹಾಗೂ ಸಂಶೋಧನೆ ಮಾಡಲು ಕ್ರಿಯಾಶೀಲತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ಹಾಗೂ ಸಂಶೋಧನೆ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ಜಿ.ಪರಶುರಾಮ್ ಅವರು ಕರೆ ನೀಡಿದರು.
ನಗರದ ಎಸ್ಎಸ್ಐಟಿ ಕ್ಯಾಂಪಸ್ನಲ್ಲಿರುವ ಸಭಾಂಗಣದಲ್ಲಿ ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ವಿಭಾಗದ ಸಮಾಜ ಕಾರ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ನಮ್ಮ ಜೀವನ ನಾವು ಕಟ್ಟಿಕೊಳ್ಳುವುದನ್ನು ಬಿಟ್ಟು ಬೇರೆಯವರ ಜೀವನ ಹೇಗೆ ಬದಲಾಯಿಸಲು ಸಾಧ್ಯ. ಹಾಗಾಗಿ ನಮ್ಮ ಬದುಕು ನಾವೇ ರೂಪಿಸಿಕೊಳ್ಳಬೇಕು. ಸಮಾಜ ಕಾರ್ಯ ವಿದ್ಯಾರ್ಥಿಗಳು ಉತ್ತಮ ಸಮಾಜ ಕಟ್ಟುವ ಕಾಯಕ ಮಾಡಬೇಕು. ಸಮಾಜದ ಕಠಿಣ ಸವಾಲುಗಳನ್ನು ಎದುರಿಸುವ ಸಾಮಥ್ರ್ಯ ಹಾಗೂ ಸಂಶೋಧನೆ ಮಾಡಲು ಕ್ರಿಯಾಶೀಲತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ.ಪರಶುರಾಮ್ ಒತ್ತಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆ ಅಭಿವೃದ್ಧಿ ಅಧಿಕಾರಿ ಜಾಹ್ನ.ವಿ.ಎಸ್ ಅವರು ಮಾತನಾಡಿ, ನಮ್ಮ ಬಲದ ಮೇಲೆ ಕಲಿಕೆಗೆ ಪ್ರಯತ್ನ ಮಾಡಿದಾಗ ಒಳ್ಳೆಯ ಬೆಳವಣಿಗೆ ಸಾಧ್ಯ. ಪ್ರತಿಯೊಂದು ಹಂತದಲ್ಲಿ ಮಾತನಾಡುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲರಾದ ಡಿ.ಮಮತಾ ಮಾತನಾಡಿ, ಭವಿಷ್ಯ ಗುರಿಯತ್ತ ಸಾಗಲಿ. ಯಾವುದೇ ನಿಬರ್ಂಧಗಳಿಲ್ಲದ ಎಲ್ಲಾ ಕ್ಷೇತ್ರದಲ್ಲೂ ಉದ್ಯೋಗಾವಕಾಶ ಕಲ್ಪಿಸಬೇಕು. ನೀವು ಗುರುತಿಸಿಕೊಳ್ಳುವ ಪ್ರಯತ್ನ ಮಾಡಿದಾಗ ಯಶಸ್ಸು ಖಂಡಿತ ಸಿಗುತ್ತದೆ ಎಂದರು.
ಪ್ರಥಮ ವರ್ಷದ ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಎಸ್ಎಸ್ಐಬಿಎಂ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಪಿ.ಕೆ.ರಘು, ಡಾ.ಗುರುಪ್ರಸಾದ್, ಎಂ.ರಾಜು, ಎಚ್.ಕೆ.ಚೇತನ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.