ಬೆಂಗಳೂರು: ಇಲ್ಲಿಯ ಸ್ವತಂತ್ರ ಉದ್ಯಾನವನದಲ್ಲಿ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಇಬ್ಬರು ಉಪನ್ಯಾಸಕರು ಉಪವಾಸ ಸತ್ಯಾಗ್ರಹ ಮಾಡಿದ ಹಿನ್ನಲೆಯಲ್ಲಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಅಸ್ವಸ್ಥತೆ ಗೊಂಡವರಲ್ಲಿ ಹಾವೇರಿ ಜಿಲ್ಲೆ ಯ ಸುರೇಶ್ ಕೂಡ ಒಬ್ಬರು.
ಉಪನ್ಯಾಸಕರಾದ ಸುರೇಶ್ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರಿಂದ ಅಸ್ವಸ್ಥರಾಗಿ ನೀಶಕ್ತರಾಗಿ ಬಿದ್ದು ಆಸ್ಪತ್ರೆ ಸೇರಿದ್ದಾರೆ.
ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಜಮಾಯಿಸಿದ ಅತಿಥಿ ಉಪನ್ಯಾಸಕರು, ಸಾಗಾರೋಪಾದಿಯಲ್ಲಿ ಭಾಗವಹಿಸಿ ನಮಗೊಂದು ಭದ್ರತೆ ಕೊಡಿ, ಜೀವ ಬಿಟ್ಟೆವು, ಖಾಯಂಮಾತಿ ಬಿಡುವುದಿಲ್ಲ ಎಂಬ ಘೋಷಣೆಗಳು ಮೊಳಗಿದವು. ಇಷ್ಟೊಂದು ಬೃಹತ್ ಸಂಖೆಯಲ್ಲಿ ಉಪನ್ಯಾಸಕರು ಪ್ರತಿಭಟನೆಯನ್ನು ರಾಜಧಾನಿಯಲ್ಲೇ ಮಾಡುತ್ತಿದ್ದರೂ ಸರ್ಕಾರ ಇವರತ್ತ ತಿರುಗಿಯೂ ನೋಡಲಿಲ್ಲ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವು ಸರ್ಕಾರಕ್ಕೆ ಕೇಳುತ್ತಿದ್ದೇವೆ. ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಅದಕ್ಕಾಗಿ ಕಳೆದ ಒಂದು 40 ದಿನಗಳಿಂದ ತರಗತಿ ಬಹಿಸ್ಕರಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಹೋರಾಟ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಖಾಯಂಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅಲ್ಲದೆ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಇಂದು ಬಹುತೇಕ ಅತಿಥಿ ಉಪನ್ಯಾಸಕರ ಕರ್ತವ್ಯಗಳನ್ನು ಅವಲಂಬಿಸಿದ್ದು, ಸುಮಾರು ಹತ್ತಾರು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಅತಿಥಿ ಎಂಬ ಅನಿಷ್ಟ ಪದ್ಧತಿ ಅಂತ್ಯಗೊಳಿಸಿ ಸೇವಾ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರಿನ ಸ್ವತಂತ್ರ ಚೌಕದಲ್ಲಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.