ತುಮಕೂರು ಬಸ್ ನಿಲ್ದಾಣ ಈಗ ದೇವರಾಜು ಅರಸು ಬಸ್ ನಿಲ್ದಾಣ

ತುಮಕೂರು: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ದೇವರಾಜ ಅರಸು ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಇನ್ನು ಮುಂದೆ ದೇವರಾಜ ಅರಸು ಅವರ ಹೆಸರಲ್ಲಿ ಬಸ್ ನಿಲ್ದಾಣ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರಿಂದು ತುಮಕೂರಿನ ಕೆಎಸ್‍ಆರ್‍ಟಿಸಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿ, ಅರ್ಹ ಫಲಾನುಭವಿಗಳಿಗೆ ಲ್ಯಾಪ್‍ಟಾಪ್, ಕೃತಕ ಕೈ-ಕಾಲು, ವಿದ್ಯುತ್ ಚಾಲಿತ ವೀಲ್ ಚೇರ್ ಸೇರಿದಂತೆ ವಿವಿಧ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡುತ್ತಿದ್ದರು.

ವಿವಿಧ ಸಂಪನ್ಮೂಲಗಳ ಕ್ರೋಢೀಕರಣದಿಂದ ಪ್ರಸಕ್ತ 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 38 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಬರುವ 2024-25ನೇ ಸಾಲಿಗಾಗಿ 58ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಜನರ ಆಶೀರ್ವಾದದಿಂದ ಎರಡನೆ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಅಧಿಕಾರಕ್ಕೆ ಬಂದ ನಂತರ ಎಲ್ಲಾ ಜನಾಂಗಕ್ಕೂ ಅನುಕೂಲ ಮಾಡಲಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗಿದೆ ಎಂದರಲ್ಲದೆ, ಗೃಹ ಸಚಿವರು ಮನವಿ ಮಾಡಿರುವ ಎಲ್ಲ ಬೇಡಿಕೆಗಳನ್ನೂ ಈಡೇರಿಸುತ್ತೇನೆಂದು ಭರವಸೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕಲ್ಪತರು ನಾಡು, ಧಾರ್ಮಿಕ ಕ್ಷೇತ್ರವೆಂದೆನಿಸಿಕೊಂಡಿರುವ ತುಮಕೂರು ಜಿಲ್ಲೆಯು ಎರಡನೇ ಬೆಂಗಳೂರಾಗಲಿದೆ. ಮುಂದಿನ 50ವರ್ಷಕ್ಕೆ ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರನ್ನಾಗಿ ನಿರ್ಮಿಸಲು ತಯಾರಿ ಮಾಡಿಕೊಳ್ಳಬೇಕೆಂಬ ಆಶಾಭಾವನೆ ವ್ಯಕ್ತಪಡಿಸಿದರು.

 ಮುಖ್ಯಮಂತ್ರಿಗಳ ಕನಸಿನ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ದೊಡ್ಡ ಬದಲಾವಣೆಯಾಗಿದೆಯಲ್ಲದೆ ಪ್ರಜೆಗಳಿಗೆ ಆರ್ಥಿಕ ಶಕ್ತಿಯನ್ನೂ ತಂದಿದೆ.    ನಮ್ಮ ಯೋಚನೆಯು ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ   ಇನ್ನೂ ಹಲವು ವಿನೂತನ ಕಾರ್ಯಕ್ರಮಗಳನ್ನು ರೂಪಿಸಲು ಚಿಂತನೆ ನಡೆಸಲಾಗಿದೆ ಎಂದರಲ್ಲದೆ ನಾನು ತುಮಕೂರಿಗೆ ಬಂದಾಗ ಪಾವಗಡ ಸೋಲಾರ್ ಪಾರ್ಕ್ ನೆನಪಿಗೆ ಬರುತ್ತದೆ.  ಇನ್ನೂ 10,000 ಹೆಕ್ಟೇರ್ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ವಿಸ್ತರಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು

ಜಿಲ್ಲೆಯಲ್ಲಿ ಹಾದು ಹೋಗುವ ಬೃಹತ್ ನೀರಾವರಿ ಯೋಜನೆಗಳಾದ ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಡಾ|| ಜಿ. ಪರಮೇಶ್ವರ್ ಪ್ರಾಸ್ತಾವಿಕವಾಗಿ ಮಾತನಾಡಿ, ಬಡವಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಡಾ|| ಜಿ. ಪರಮೇಶ್ವರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ನಗರದಲ್ಲಿ 35 ವಾರ್ಡ್‍ಗಳಲ್ಲಿ 6 ವಾರ್ಡ್‍ಗಳಿಗೆ ಸ್ಮಾರ್ಟ್ ಸಿಟಿ ಹಣ ಬಂದಿದೆ. ಉಳಿದ ವಾರ್ಡ್‍ಗಳು ಅಭಿವೃದ್ಧಿಯಾಗಿಲ್ಲ. ಹಾಗಾಗಿ ಈ ಆಯವ್ಯಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 500 ಕೋಟಿ ರೂ.ಗಳ ಅನುದಾನ ಒದಗಿಸಬೇಕೆಂದರಲ್ಲದೆ ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರಿಗೆ ಬೆಂಗಳೂರಿನಿಂದ ಮೆಟ್ರೊ ಯೋಜನೆ ಮಂಜೂರು, ತುಮಕೂರು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ, ಏμÁ್ಯದಲ್ಲಿಯೇ ಬಹು ಎತ್ತರದ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ಅಗತ್ಯ ಅನುದಾನ, ಕೈಗಾರಿಕಾ ಪ್ರದೇಶ ಅಭಿವೃದ್ಧಿಯಡಿ ವಸಂತ ನರಸಾಪುರಕ್ಕೆ ಇಂಟಿಗ್ರೇಟೆಡ್ ಟೌನ್‍ಶಿಪ್ ಸೌಲಭ್ಯ, ನೆನೆಗುದಿಗೆ ಬಿದ್ದಿರುವ ಭದ್ರ ಮೇಲ್ದಂಡೆ ಯೋಜನೆಗೆ ಅನುದಾನ, ಹೊಸ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಘೋಷಿಸಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *