ಕೇಂದ್ರ ಸೇವೆಗೆ ರಾಹುಲ್ ಕುಮಾರ್ ಶಹಪುರ್‍ವಾಡ್ – ವರ್ಗಾವಣೆ

ಕೇಂದ್ರ ಸೇವೆಗೆ ರಾಜ್ಯದ ಐಪಿಎಸ್ ಅಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್ ಅವರನ್ನು ಎನ್‍ಐಎಎಸ್‍ಪಿಯಾಗಿ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ.
ಕೇಂದ್ರ ಸೇವೆಗೆ ರಾಜ್ಯದ ಐಪಿಎಸ್ ಅಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್ (Rahul Kumar Shahapurwad)​ ಅವರನ್ನು ಎನ್‍ಐಎಎಸ್‍ಪಿಯಾಗಿ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಅದೇ ರೀತಿಯಾಗಿ 7 ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್ ಅವರು ಸಾರ್ವಜನಿಕರೊಂದಿಗೆ ಹೆಚ್ಚು ಆಪ್ತವಾಗಿದ್ದರು. ಜನಪರ ಐಪಿಎಸ್ ಅಧಿಕಾರಿ ಎಂಬ ಕೀರ್ತಿ ಗಳಿಸಿದ್ದಾರೆ. ಇತ್ತೀಚೆಗೆ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ಆಗಿದ್ದ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು.

ರಾಹುಲ್ ಕುಮಾರ್ ಶಹಪುರ್‍ವಾಡ್ ಪರಿಚಯ

ಐಪಿಎಸ್ ಅಧಿಕಾರಿ ರಾಹುಲ್ ಕುಮಾರ್ ಶಹಪುರ್‍ವಾಡ್ ಅವರ ತಂದೆ ಮಹಾರಾಷ್ಟ್ರದವರಾಗಿದ್ದು, ತಾಯಿ ಆಂಧ್ರ ಮೂಲದವರು. ರಾಹುಲ್ ಕುಮಾರ್ ಶಹಪುರ್‍ವಾಡ್ ಅವರು ವಿದ್ಯಾರ್ಥಿಯಾಗಿದ್ದಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿಗಳ ಪರೀಕ್ಷೆಗಳಲ್ಲಿ ಟಾಪರ್ ಆಗಿದ್ದವರು.

ಎಂಬಿಎ ತೇರ್ಗಡೆಯಾಗಿ ಕೈತುಂಬಾ ಸಂಬಳ ಸಿಗುವ ಉದ್ಯೋಗಕ್ಕೆ ಸೇರಿಕೊಂಡರೂ ಆ ಉದ್ಯೋಗ ತೃಪ್ತಿ ನೀಡದ ಕಾರಣ ಅದನ್ನು ತೊರೆದು ಯುಪಿಎಸ್‍ಸಿ ಪರೀಕ್ಷೆ ಪಾಸು ಮಾಡಿ ಐಪಿಎಸ್ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡರು. 2012ರ ಐಪಿಎಸ್ ಅಧಿಕಾರಿಯಾಗಿ ಪೆÇಲೀಸ್ ಸೇವೆಗೆ ಸೇರ್ಪಡೆಗೊಂಡರು.

ರಾಹುಲ್ ಅವರು ಮೊದಲು ಬಂಟ್ವಾಳದಲ್ಲಿ ಎಎಸ್‍ಪಿ ಆಗಿ ನೇಮಕಗೊಂಡರು. ಬೆಂಗಳೂರು ನಗರ ಪೆÇಲೀಸ್ ಆಯುಕ್ತರ ಕಚೇರಿಗೆ ನಿಯೋಜನೆಗೊಂಡರು. ಬಳಿಕ ಹಾಸನ ಮತ್ತು ತುಮಕೂರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಸಲ್ಲಿದ್ದಾರೆ.

Leave a Reply

Your email address will not be published. Required fields are marked *