ಕಾಂಗ್ರೆಸ್ : ಎಸ್.ಪಿ. ಮುದ್ದಹನುಮೇಗೌಡ ತುಮಕೂರು ಲೋಕಸಭೆ ಅಭ್ಯರ್ಥಿ

ತುಮಕೂರು:ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಲೋಕಸಭಾ ಸದಸ್ಯರಾದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದರು.

ಅವರಿಂದು ನವ ದೆಹಲಿಯಲ್ಲಿ ಎಐಸಿಸಿಯ ಸಿಇಸಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಂಬಂಧ ನಿನ್ನೆ ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಕರ್ನಾಟಕ 7 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಅಧಿಕೃತವಾಗಿ ಘೋಷಣೆ ಮಾಡಿದರು.
ನಾವು ಗ್ಯಾರಂಟಿಗಳನ್ನು ಕೊಟ್ಟ ಮಾತಿನಂತೆ ಈಡೇರಿಸಿದ್ದೇವೆ. ಈ ಹಿನ್ನಲೆಯಲ್ಲಿ ನಮಗೆ ಗೆಲ್ಲುವ ಭರವಸೆ ಇದೆ ಎಂದು ಹೇಳಿದರು
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿಯಿಂದ ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಸಿಇಸಿ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ಅಭ್ಯರ್ಥಿಗಳನ್ನು ಫೈನಲ್ ಮಾಡುವ ಸಂಬಂಧ ನಡೆಸಲಾಗಿತ್ತು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಭೆಯಲ್ಲಿ ಭಾಗಿಯಾಗಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಭಾಗಿಯಾಗಿ, ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಾಗಿತ್ತು.

ದೆಹಲಿಯಲ್ಲಿ ನಡೆದ ಸರಣಿ ಸಭಎಯ ನಂತ್ರ ಕರ್ನಾಟಕದ 9 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್ ಅವರಿಗೆ ಟಿಕೆಟ್ ನೀಡಿದ್ದು, ಚಿತ್ರದುರ್ಗದ ಟಿಕೆಟ್ ಅಕಾಂಕ್ಷಿ ಚಂದ್ರಪ್ಪನವರ ಹೆಸರನ್ನು ಓಲ್ಡ್‍ನಲ್ಲಿ ಇಡಲಾಗಿದೆ.
ಹೀಗಿದೆ ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿರುವಂತ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು ಗ್ರಾಮಾಂತರ- ಡಿ.ಕೆ. ಸುರೇಶ್
ಶಿವಮೊಗ್ಗ : ಗೀತಾ ಶಿವರಾಜಕುಮಾರ್
ಮಂಡ್ಯ- ಸ್ಟಾರ್ ಚಂದ್ರು
ವಿಜಯಪುರ- ರಾಜು ಹುಲುಗೂರು
ಹಾಸನ- ಶ್ರೇಯಸ್ ಪಾಟೀಲ್
ತುಮಕೂರು- ಮುದ್ದೆ ಹನುಮೇ ಗೌಡ
ಹಾವೇರಿ- ಅನಂತಸ್ವಾಮಿ ಗಡ್ಡೆವರಮಠ

Leave a Reply

Your email address will not be published. Required fields are marked *