ತುಮಕೂರು : ತುಮಕೂರು ಜಿಲ್ಲೆಯಲ್ಲಿ ಗ್ರಾಮ ಮಟ್ಟದಿಂದ ಪಕ್ಷ ಸಂಘಟನೆ ಮಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್‍ಗೆ ಅಡಿಪಾಯ ಹಾಕಿದ್ದರೂ ನಮಗೆ ಲೋಕಸಭೆಗೆ ಟಿಕೆಟ್ ನೀಡಿಲ್ಲವೆಂದು ಕೆಪಿಸಿಸಿ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಅವರು ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾರವರ ಬಳಿ ಅಸಮದಾನ ವ್ಯಕ್ತಪಡಿಸಿದರು.
ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನು ಎಸಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಯೂರ ಜಯಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಅವರೊಂದಿಗೆ ಮುರಳೀಧರ ಹಾಲಪ್ಪ ಭೇಟಿ ನೀಡಿ ಕಳೆದ ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿರುವ ಬಗ್ಗೆ, ಕೋವಿಡ್ ಸಂದರ್ಭ, ಭಾರತ್ ಜೋಡೋ, ಪ್ರತಿ ಕಾರ್ಯಕರ್ತರ – ಸಾಮಾನ್ಯ ಜನರ ಸಂಕಷ್ಟಗಳಿಗೆ ಹೆಗಲಾಗಿ ನಿಂತಿರುವುದು, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಕಾರ್ಯಗಳ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿ, ಲೋಕಸಭಾ ಚುನಾವಣೆಯ ಕುರಿತು ಸಾರ್ವಜನಿಕರ ಅಭಿಪ್ರಾಯ ಮತ್ತು ಪಕ್ಷದ ಮುಖಂಡರ, ಕಾರ್ಯಕರ್ತರ ಪ್ರತಿಕ್ರಿಯೆ ತೆಗೆದುಕೊಳ್ಳಬೇಕೆಂದು ಚರ್ಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸುರ್ಜೇವಾಲಾರವರು ಮುಂದೆ ಉತ್ತಮ ಭವಿಷ್ಯವಿದ್ದು, ಪಕ್ಷ ಸಂಘಟನೆ ಕೈಗೊಳ್ಳುವಂತೆ ಸೂಚಿಸಿದ್ದು.
ದೇಶದಾತ್ಯಂತ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ನ್ಯಾಯಕ್ಕಾಗಿ ಅಗ್ರಹಿಸಿ ಅಸಮಾಧಾನದಿಂದ ಹೊರಬಂದಿದ್ದಾರೆ.