ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ- ಎಂ.ಶಶಿಧರ್

ತುಮಕೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟಕಟ್ಟುತ್ತಿರುವ ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ರಾಜ್ಯ ನಾಯಕ ಎಂ.ಶಶಿಧರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ದೇಶದ 19 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ರಾಜ್ಯ ನಾಯಕ ಎಂ.ಶಶಿಧರ್ ತಿಳಿಸಿದರು.

ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. 2014ರಲ್ಲಿ ಬಿಜೆಪಿ ದನಿ ಎತ್ತಿದ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ. ಅಬ್ಬರದ ಪ್ರಚಾರ ಮಾಡಿದ ‘ಗುಜರಾತ್ ಮಾದರಿ’ ಅದೃಶ್ಯವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಮಾತಿರಲಿ, ಭಾರತದ ಯುವಕರು ನಿರುದ್ಯೋಗದ ಕಷ್ಟ ತಡೆಯಲಾಗದೆ, ಯುದ್ಧ ಪೀಡಿತ ಇಸ್ರೇಲ್, ರಷ್ಯಾಗಳಿಗೆ ಕೆಲಸ ಹುಡುಕಿಕೊಂಡು ಹೋಗುತ್ತಿದ್ದಾರೆ ಎಂದರು.

ಕಪ್ಪು ಹಣ, ಸ್ವಿಸ್ ಬ್ಯಾಂಕ್ ಹಣ ವಶಪಡಿಸುವ ಬಗ್ಗೆ ಇರಲಿ, ಎಸ್‍ಬಿಐ ಬ್ಯಾಂಕ್‍ನಲ್ಲಿರುವ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡದಂತೆ ತಡೆಯಲು ಬಿಜೆಪಿ ಸರ್ವ ಪ್ರಯತ್ನ ಮಾಡಿದೆ. ಜಾಗತಿಕ ಹಸಿವಿನ ಸೂಚ್ಯಂಕ, ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಭಾರತದ ಸ್ಥಾನ ಪಾತಾಳದಲ್ಲಿದೆ. ಆದರೆ ಶ್ರೀಮಾನ್ ಮೋದಿಯವರು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಇಷ್ಟು ವರ್ಷ ಆಳ್ವಿಕೆ ನಡೆಸಿ ದೇಶವನ್ನು ಹಾಳುಗೆಡವಿದ ಕಾರಣದೇಶವನ್ನುಅಭಿವೃದ್ಧಿಯ ಪಥಕ್ಕೆತರಲುಇನ್ನೂಒಂದು ಅವಕಾಶ ಕೊಡಿಎಂದು ಕೇಳುತ್ತಾರೆ. ಹಿಂದೆಕಾಂಗ್ರೆಸ್ ಆಳ್ವಿಕೆಯಲ್ಲಿ ಅವರುಇದೇರೀತಿ ಬ್ರಿಟಿಷರ ಮೇಲೆ ಗೂಬೆ ಕೂರಿಸುತ್ತಿದ್ದರು ಎಂದರು.

ಅಂಬಾನಿ, ಅದಾನಿಗಳು ವಿಕಸಿತಗೊಂಡು ಜಗತ್ತಿನಅತಿ ಶ್ರೀಮಂತ ಬಂಡವಾಳಶಾಹಿಗಳಾಗಿದ್ದಾರೆ.
ಅಂತಹಆಧುನಿಕ ಬಿಲಿಯಾಧಿಪತಿಗಳ ಸರಕು ಸಾಗಾಣಿಕೆಯನ್ನುತ್ವರಿತ ಹಾಗೂ ಸುಲಭಗೊಳಿಸಲು ದುಬಾರಿ ಸುಂಕದಎಕ್ಸ್‍ಪ್ರ್ರೆಸ್ ಹೆದ್ದಾರಿಗಳನ್ನು ರೈತರ ಬದುಕಿನಆಧಾರದ ಜಮೀನುಗಳನ್ನು ಸ್ವಾಹ ಮಾಡಿ, ಜನರತೆರಿಗೆಯಲ್ಲಿ ನಿರ್ಮಿಸಿ, ಇದೇ ಅಭಿವೃದ್ಧಿ ಎಂದು ಒಪ್ಪಿಸಲಾಗಿದೆ ಎಂದು ಆರೋಪಿಸಿದರು.

ಆದರೆ ಈ ಚುನಾವಣೆ ಬಂಡವಾಳಶಾಹಿ ಮತ್ತುಕಾರ್ಮಿಕರ ನಡುವಿನ, ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಭಾರತದ ಶೋಷಿತದುಡಿಯುವ ವರ್ಗದ, ಬಡರೈತರ ಪರ್ಯಾಯವಾಗಿದೇಶದ ಎಡಪಕ್ಷಗಳು ಒಂದುಒಕ್ಕೂಟದ ಮೂಲಕ ಜನ ಹೋರಾಟಗಳನ್ನು ಕಟ್ಟಬೇಕಾಗಿತ್ತು. ಚುನಾವಣೆಗಳು ಪರಿಹಾರವಲ್ಲ, ಸಮಾಜವಾದವೇ ನೈಜ ಪರಿಹಾರ ಎಂಬ ಪ್ರಚಾರವನ್ನು ಕೈಗೆತ್ತಿಕೊಳ್ಳಬೇಕಿತ್ತು ಎಂದರು. ಆದರೆದುರಂತವೆಂದರೆ ಸಿಪಿಐ, ಸಿಪಿಐ (ಎಂ) ನಂತಹಎಡವಾದಿ ಪಕ್ಷಗಳು ಕೆಲವು ಎಂಪಿ ಸೀಟುಗಳ ಆಸೆಗೆ ಇಂಡಿಯಾಮೈತ್ರಿಕೂಟವನ್ನು ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷವು ಶೋಷಿತಜನರ ನೈಜ ಹೋರಾಟದ ಪರ್ಯಾಯವಾಗಿತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ ಎಂದರು.

ಎಸ್‍ಯುಸಿಐ ಕಮ್ಯುನಿಷ್ಟ್ ಪಕ್ಷದಅ ಭ್ಯರ್ಥಿಯಾಗಿ ಎಸ್.ಎನ್. ಸ್ವಾಮಿಯವರು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯನಾಯಕರದ ಎಂ ಶಶಿಧರ್, ತುಮಕೂರು ಲೋಕಸಭಾ ಅಭ್ಯರ್ಥಿ ಎನ್ ಎಸ್ ಸ್ವಾಮಿ, ಅಶ್ವಿನಿ ಕಲ್ಯಾಣಿ, ರತ್ನಮ್ಮ ಮಂಜುಳಾ, ಲಕ್ಕಪ್ಪ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *