ಸ್ಟ್ರಾಂಗ್ ರೂಂ ಸೇರಿದ ಇವಿಎಂ ಯಂತ್ರಗಳು, ಸಿಆರ್‍ಪಿಎಫ್ ಭದ್ರತೆ

ತುಮಕೂರು- ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿನ ಇವಿಎಂ ಯಂತ್ರಗಳನ್ನು ತುಮಕೂರು ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂಗಳಲ್ಲಿ ಇಡಲಾಯಿತು.

ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಇವಿಎಂ ಯಂತ್ರಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇರಿಸಲಾಗಿದ್ದು, ಈ ಎರಡೂ ಸ್ಟ್ರಾಂಗ್ ರೂಂಗಳಿಗೆ ಸಿಆರ್‍ಪಿಎಫ್ ಯೋಧರ ಭದ್ರತೆ ಒದಗಿಸಲಾಗಿದೆ.

ಮತಯಂತ್ರಗಳನ್ನಿಟ್ಟಿರುವ ಸ್ಟ್ರಾಂಗ್ ರೂಂಗಳ ಬಾಗಿಲುಗಳಿಗೆ ಬೀಗ ಹಾಕಿ ಸೀಲ್ ಮಾಡಿದ ನಂತರ, ಆ ಬಾಗಿಲುಗಳನ್ನು ಸಹ ಹೊರಗಿನಿಂದ ಮುಚ್ಚಿ ಸೀಲ್ ಮಾಡಲಾಗಿದೆ. ಈ ಸೀಲನ್ನು ಮತ ಎಣಿಕೆಯ ಜಿಲ್ಲಾ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸೀಲ್ ಹೊಡೆದು ಓಪನ್ ಮಾಡಲಾಗುವುದು. ಅಲ್ಲಿಯವರೆಗೂ ಸೀಲ್ ಆಗಿರುವ ಬಾಗಿಲುಗಳನ್ನು ಯಾರೂ ತೆರೆಯಲು ಸಾಧ್ಯವಿಲ್ಲ.

ಜೂ. 4ರ ವರೆಗೆ ಈ ಎರಡು ಸ್ಟ್ರಾಂಗ್ ರೂಂಗಳು ಸಿಆರ್‍ಪಿಎಫ್ ಯೋಧರು ಹಾಗೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಇರಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಡಿಸಿ ಪರಿಶೀಲನೆ

ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇಡಲಾಗಿರುವ ಭದ್ರತಾ ಕೊಠಡಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಎಲ್ಲ ಇವಿಎಂ ಯಂತ್ರಗಳನ್ನು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದ್ದು, ಈ ಎರಡು ಸ್ಟ್ರಾಂಗ್ ರೂಂಗಳ ಜವಾಬ್ದಾರಿಯನ್ನು ಸಿಆರ್‍ಪಿಎಫ್‍ನವರಿಗೆ ಹಸ್ತಾಂತರಿಸಲಾಗಿದೆ. ಜೂ. 4 ರ ವರೆಗೆ ಸಿಆರ್‍ಪಿಎಫ್ ನಿಯಂತ್ರಣದಲ್ಲಿ ಈ ಸ್ಟ್ರಾಂಗ್ ರೂಂ ಇರುತ್ತವೆ ಎಂದು ಹೇಳಿದರು.

ಅಧಿಕಾರಿಗಳಿಗೆ ಧನ್ಯವಾದ

ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯಶಸ್ವಿಯಾಗಿ, ಶಾಂತಿಯುತವಾಗಿ, ವ್ಯವಸ್ಥಿತವಾಗಿ ನಡೆಯಲು ಕಾರಣಕರ್ತರಾದ ಪೆÇಲೀಸ್ ಅಧಿಕಾರಿಗಳು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ 22 ಲಕ್ಷ ಮತದಾರರು, ಸಾರ್ವಜನಿಕರು, ಮಾಧ್ಯಮದವರಿಗೆ ಜಿಲ್ಲಾಡಳಿತ ಪರವಾಗಿ ಧನ್ಯವಾದ ಹೇಳುವುದಾಗಿ ತಿಳಿಸಿದರು.

ಹಾಗೆಯೇ ಎಲ್ಲ ರಾಜಕೀಯ ಪಕ್ಷಗಳವರು ಸಹ ಚುನಾವಣೆಯ ಯಶಸ್ವಿಗೆ ಸಹಕಾರ ನೀಡಿದ್ದಾರೆ. ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ಚಟುವಟಿಕೆ, ಪಾಲಿಕೆ ಅಧಿಕಾರಿಗಳು ನಡೆಸಿದ ಜಾಗೃತಿ ಜಾಥಾಗಳು ಸಹ ಪ್ರಮುಖ ಕಾರಣವಾಗಿದ್ದು, ಅವರಿಗೂ ಸಹ ಧನ್ಯವಾದ ಹೇಳುತ್ತೇನೆ ಎಂದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಎಫ್‍ಎಸ್‍ಟಿ ತಂಡ ಕಾರ್ಯನಿರ್ವಹಿಸುತ್ತಿರುತ್ತದೆ. ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಮೇ 7 ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಚೆಕ್ ಪೆÇೀಸ್ಟ್ ಕಾರ್ಯನಿರ್ವಹಿಸುತ್ತವೆ ಎಂದು ಅವರು ಮಾಹಿತಿ ನೀಡಿದರು.

ಶೇ. 77.99 ರಷ್ಟು ಮತದಾನ

ತುಮಕೂರು ಲೋಕಸಭಾ ಚುನಾವಣೆಯಲ್ಲಿ 12,95,732 ಮತದಾರರು ಮತ ಚಲಾಯಿಸುವ ಮೂಲಕ ಶೇ. 77.99 ರಷ್ಟು ಮತದಾನವಾಗಿದೆ ಎಂದು ಅವರು ಹೇಳಿದರು.

2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇ. 0.7 ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಆಗಿದೆ. 2ನೇ ಅತಿ ಹೆಚ್ಚು ಮತದಾನ ತುಮಕೂರು ಗ್ರಾಮಾಂತರದಲ್ಲಿ ಆಗಿದೆ. ತುಮಕೂರು ನಗರದಲ್ಲಿ 2019ಕ್ಕೆ ಹೋಲಿಸಿದಾಗ ಈ ಬಾರಿ ಶೇ. 2 ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದ್ದು, ಈ ಬಾರಿ ಶೇ. 67.38 ರಷ್ಟು ಮತದಾನವಾಗಿದೆ ಎಂದರು.

8 ಮತಗಟ್ಟೆಯಲ್ಲಿ ಮತಯಂತ್ರಗಳ ಲೋಪದೋಷ ಕಂಡು ಬಂದಿತ್ತು. ತಕ್ಷಣ ಅದನ್ನು ಬದಲಾಯಿಸಿ ಮತದಾನ ಮುಂದುವರೆಸಲಾಯಿತು ಎಂದು ಅವರು ಹೇಳಿದರು.

ಎಸ್ಪಿ ಪರಿಶೀಲನೆ

ಸ್ಟ್ರಾಂಗ್ ರೂಂಗಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ, ತುಮಕೂರು ಲೋಕಸಭೆ ಸಾರ್ವತ್ರಿಕ ಚುನಾವಣೆ ಏ. 26 ರಂದು ಯಶಸ್ವಿಯಾಗಿ ಮುಗಿದಿದ್ದು, ತುಮಕೂರು ವಿವಿ ವಿಜ್ಞಾನ ಕಾಲೇಜಿನಲ್ಲಿ 4 ಕ್ಷೇತ್ರಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 4 ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇಡಲಾಗಿದ್ದು, ಈ ಸ್ಟ್ರಾಂಗ್ ರೂಂಗಳಿಗೆ ಸಿವಿಲ್ ಪೆÇಲೀಸರು ಹಾಗೂ ಸಿಆರ್‍ಪಿಎಫ್ ಯೋಧರ ಭದ್ರತೆ ಒದಗಿಸಲಾಗಿದೆ ಎಂದರು.

ಸಿವಿಲ್ ಪೆÇಲೀಸರು ಮತ್ತು ಸಿಆರ್‍ಪಿಎಫ್ ಪೊಲೀಸ್ರು ಜೂ. 4ರ ವರೆಗೆ ಪಾಳಿ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *