ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ: ವಾಹನ ಸಂಚಾರ ಮಾರ್ಗ ಬದಲು

ತುಮಕೂರು : ತುಮಕೂರು ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಕಾಮಗಾರಿ ಅವಧಿಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶಿಸಿದ್ದಾರೆ.

ವಾಹನ ದಟ್ಟಣೆಯಿಂದ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಮೇಲ್ಕಂಡ ಆದೇಶದನ್ವಯ ತುಮಕೂರು ನಗರದ ಒಳಭಾಗದಿಂದ ಶಿರಾ ಗೇಟ್ ಕಡೆಗೆ ಹೋಗುವ ಎಲ್ಲಾ ವಾಹನಗಳನ್ನು ಮತ್ತು ಶಿರಾ ಹಾಗೂ ಮಧುಗಿರಿ ಕಡೆಯಿಂದ ತುಮಕೂರು ನಗರಕ್ಕೆ ಬರುವ ಎಲ್ಲಾ ವಾಹನಗಳನ್ನು ಲಿಂಗಾಪುರ ಎನ್.ಹೆಚ್-48 ರಸ್ತೆ ಮತ್ತು ಹನುಮಂತಪುರ ಮುಖಾಂತರ ತುಮಕೂರು ಒಳಭಾಗಕ್ಕೆ ಬರಲು ಮತ್ತು ಹೊರಗೆ ಹೋಗಲು ವಾಹನ ಸಂಚಾರವನ್ನು ಮುಂದಿನ ಆದೇಶದವರೆಗೆ ಬದಲಾಯಿಸಲಾಗಿದೆ.

ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ-4ರ ಸರಪಳಿ 71.29 ಕಿ.ಮೀ.ನಲ್ಲಿ ಅಮಾನಿಕರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸುಮಾರು 120 ದಿನಗಳು ಬೇಕಾಗಿರುವುದರಿಂದ ಹಳೆಯ ರಾಷ್ಟ್ರೀಯ ಹೆದ್ದಾರಿ-4 ರಸ್ತೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರವನ್ನು ಬಂದ್ ಮಾಡಲು ಹಾಗೂ ಬೇರೆ ಕಡೆಯಿಂದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡತಕ್ಕದ್ದು. ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಅಗತ್ಯ ಕ್ರಮ ವಹಿಸಲು ಪೆÇಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *