ಅತಿಯಾದ ಪ್ಲಾಸ್ಟಿಕ್ ಬಳಕೆ ಜೀವಸಂಕುಲಕ್ಕೆ ಕಂಟಕ: ಕುಲಪತಿ

ತುಮಕೂರು: ಪರಿಸರದ ಅರಿವು ಮತ್ತು ಕಾಳಜಿ ಮೊದಲು ನಮ್ಮ ಮನೆಯಿಂದಲೇ ಆರಂಭವಾಗಬೇಕು. ಅತಿಯಾದ ಪ್ಲಾಸ್ಟಿಕ್ ಬಳಕೆ ಜಲಚರ ಜೀವಿಗಳಿಗೆ ಮತ್ತು ಮಾನವ ಸಂಕುಲಕ್ಕೆ ಕಂಟಕವಾಗುತ್ತಿದೆ ಎಂದು ತುಮಕೂರು ವಿವಿ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು ಕಳವಳ ವ್ಯಕ್ತಪಡಿಸಿದರು.

ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ಅಧ್ಯಯನ ವಿಭಾಗವು ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯ ಹಾಗೂ ಜೀವನ್ ಜ್ಯೋತಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್’ ವಿಷಯದ ಅಡಿಯಲ್ಲಿ ಆಯೋಜಿಸಿದ್ದ ‘ವಿಶ್ವ ಭೂಮಿಯ ದಿನ’ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಮೀನು ಹಿಡಿಯಲು ಮೀನುಗಾರರು ಬಲೆ ಬೀಸಿದರೆ ಪ್ಲಾಸ್ಟಿಕ್ ಬಾಟಲಿಗಳು ಗಾಳಕ್ಕೆ ಸಿಗುತ್ತಿವೆ. ಭೂಮಿಯನ್ನು ಕಾಪಾಡಿಕೊಳ್ಳಬೇಕಾದರೆ ಮರ ಗಿಡಗಳನ್ನು ಬೆಳೆಸುವುದರೊಂದಿಗೆ ಸ್ವಚ್ಛತೆ ಕಾಪಾಡಿಕೊಳ್ಳುವುದೂ ಮುಖ್ಯ. ಪ್ಲಾಸ್ಟಿಕ್ ಬಳಸಬೇಡಿ ಎಂದು ಹೇಳುವವರೇ ಹೆಚ್ಚು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ವಿವಿಯ ಪರೀಕ್ಷಾಂಗ ಕುಲಸಚಿವ ಪೆÇ್ರ. ಪ್ರಸನ್ನಕುಮಾರ್ ಕೆ. ಮಾತನಾಡಿ, ಮರ-ಗಿಡಗಳಿದ್ದರೆ ಜೀವ, ಜೀವನ. ಆದರಿಂದು ಪ್ರಕೃತಿಯನ್ನು ಅಳಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ. ಮುಂದಿನ ತಲೆಮಾರಿಗೆ ಪ್ರಕೃತಿಯನ್ನು ಉಳಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಪ್ರಕೃತಿಗೆ ಸಂಬಂಧಿಸಿದ ಪ್ರತಿಯೊಂದು ವಿಷಯವು ಈ ವಿಚಾರ ಸಂಕಿರಣದಲ್ಲಿ ಚರ್ಚೆ ಆಗಬೇಕು ಎಂದು ಹೇಳಿದರು.

ಕರ್ನಾಟಕ ಗೃಹ ಸಚಿವಾಲಯದ ವಿಶೇಷ ಅಧಿಕಾರಿ ಡಾ. ನಾಗಣ್ಣ ಮಾತನಾಡಿ, ಬೆಳೆ ಬೆಳೆಯಲು ರಾಸಾಯನಿಕ ಗೊಬ್ಬರದ ಬದಲಿಗೆ ಸಾವಯವ ಗೊಬ್ಬರವನ್ನು ಬಳಸಿದರೆ ಭೂಮಿಯ ಮತ್ತು ನಮ್ಮ ಆರೋಗ್ಯ ಎರಡೂ ಸುರಕ್ಷಿತವಾಗಿರುತ್ತದೆ. ಇದನ್ನು ಕೃಷಿಕರು ಅರ್ಥಮಾಡಿಕೊಳ್ಳಬೇಕು. ಕೃಷಿಕರಿಗೆ ಈ ಕುರಿತು ಅರಿವು ಮೂಡಿಸುವ ಕಾರ್ಯವನ್ನು ವಿದ್ಯಾವಂತರಾದ ನಾವು ಮಾಡಬೇಕು ಎಂದು ತಿಳಿಸಿದರು.

ವಿವಿಯ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಯೋಜಕ ಡಾ. ದ್ವಾರಕಾನಾಥ್ ವಿ., ಕುವೆಂಪು ವಿವಿಯ ಪರಿಸರ ವಿಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪೆÇ್ರ. ನಾರಾಯಣ ಜೆ., ಪೆÇ್ರ. ಯೋಗೇಂದ್ರ ಕೆ., ಜೀವನ್ ಜ್ಯೋತಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಎನ್. ಚಂದ್ರಶೇಖರ್, ಅಭಿವೃದ್ಧಿ ಸಂಸ್ಥೆಯ ಸಿ. ನರಸಿಂಹಮೂರ್ತಿ., ಸ್ವಾಡ್ರ್ಸ್ ಸಂಸ್ಥೆಯ ಡಿ. ಟಿ. ಶ್ರೀನಿವಾಸ್ ಮೂರ್ತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *