ಜೂನ್ 21ರಂದು ಯೋಗ ದಿನಾಚರಣೆ

ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಆವರಣ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು ಬೆಳಿಗ್ಗೆ 6:30 ಗಂಟೆಯಿಂದ 8 ಗಂಟೆಯವರೆಗೆ “ತನಗಾಗಿ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು.

ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ  ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅವರು ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ರಾಜ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಭಾಗವಹಿಸಲಿದ್ದಾರೆ. ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ವಿವಿಧ ಸಚಿವರು, ಅಧಿಕಾರಿಗಳು ಭಾಗವಹಿಸುವರು. 

Leave a Reply

Your email address will not be published. Required fields are marked *